ಮಂಡ್ಯ: ಮೂರು-ನಾಲ್ಕು ದಿನಗಳಲ್ಲಿಯೇ ಲೋಕಸಭಾ ಚುನವಾಣೆಯಲ್ಲಿ ನನ್ನ ಸ್ಪರ್ಧೆಯ ಬಗ್ಗೆ ಹೇಳುತ್ತೇನೆ ಎಂದು ಹೇಳಿದ್ದ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಶಾಕ್ ಕೊಟ್ಟಿದೆ.
ಮಂಡ್ಯದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧಾರ ಮಾಡಿದೆ. ಈ ಮೂಲಕ ಸುಮಲತಾ ಅವರಿಗೆ ಬಿಜೆಪಿ ಬೆಂಬಲವನ್ನು ಕ್ಯಾನ್ಸಲ್ ಮಾಡುವ ಮೂಲಕ ಶಾಕ್ ಕೊಟ್ಟಿದೆ. ಮಂಡ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿ ಹಾಕದಿದ್ದರೆ ತಪ್ಪು ಸಂದೇಶ ರವಾನೆ ಆಗುತ್ತದೆ ಎಂದು ಸೋಮವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಹೇಳಿತ್ತು. ಆಗ ಬಿಜೆಪಿ ನಾಯಕರು ಆಕ್ರೋಶಗೊಂಡು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕಲೆಬೇಕೆಂದು ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಬಿಜೆಪಿ ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಹಾಕುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಸುಮಲತಾ ಅವರಿಗೆ ಕಾಂಗ್ರೆಸ್ಸಿನಿಂದ ಟಿಕೆಟ್ ಸಿಗಲಿಲ್ಲ ಎಂದರೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಬಿಜೆಪಿ ಕಾರ್ಯಕರ್ತರು ಮನವಿ ಮಾಡಿದ್ದರು. ಆದರೆ ಸುಮಲತಾ ಅವರು ನಾನು ಮಂಡ್ಯದಲ್ಲಿಯೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv