ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ – ಹೆಣ್ಣುಮಗುವಿನ ಜನನದ ಮೇಲೆ 2 ಲಕ್ಷ ರೂ. ಉಳಿತಾಯ ಬಾಂಡ್

Public TV
1 Min Read

ಜೈಪುರ: ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಗೆ (Assembly Elections) ಬಿಜೆಪಿ (BJP) ಗುರುವಾರ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ (LPG) ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಮತ್ತು 2.5 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದೆ.

‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ (JP Nadda), ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ (Congress) ಸರ್ಕಾರದ ಕಾಗದ ಸೋರಿಕೆ ಮತ್ತು ಇತರ ಆರೋಪಗಳ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ:‌ ಭೂಮಿಗೆ ಬಿತ್ತು ಚಂದ್ರಯಾನ-3 ರಾಕೆಟ್ ಅವಶೇಷ

ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ ಅವರು, ಪ್ರತಿ ಜಿಲ್ಲೆಯಲ್ಲಿ ‘ಮಹಿಳಾ ಠಾಣೆ’ ಮತ್ತು ಪ್ರತಿ ಪೊಲೀಸ್ ಠಾಣೆಯಲ್ಲಿ ‘ಮಹಿಳಾ ಡೆಸ್ಕ್’ ಮತ್ತು ಪ್ರತಿ ನಗರದಲ್ಲಿ ‘ಆ್ಯಂಟಿ ರೋಮಿಯೋ ಸ್ಕ್ವಾಡ್’ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕನ್ನಡ ಬೆಳೆಯಬೇಕಾದರೆ ಜನಮನದಲ್ಲಿ ವ್ಯಾಪಕ ಬದಲಾವಣೆಯಾಗಬೇಕು: ಕುಮಾರಿ ಸುದೀತಿ ಅಂಬಳೆ

ಹೆಣ್ಣುಮಗು ಜನಿಸಿದಾಗ 2 ಲಕ್ಷ ರೂ. ಉಳಿತಾಯ ಬಾಂಡ್ ಮತ್ತು ಭೂಮಿ ಹರಾಜಾದ ರೈತರಿಗೆ ಪರಿಹಾರ ನೀತಿ ಘೋಷಿಸಿದರು. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆ – ಆರೋಪಿಗಳನ್ನು ಬಡಿದು ಕೊಂದ ಗ್ರಾಮಸ್ಥರು

Share This Article