ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ವಿಜಯೇಂದ್ರ

Public TV
1 Min Read

ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ದಲಿತರಿಗೆ (Dalits) ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಕಾರಿದರು.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಗೂ ಮುನ್ನ ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಒಂದೆಡೆ ಎಸ್ಟಿ ಅಭಿವೃದ್ಧಿ ನಿಗಮ, ಎಸ್‌ಇಎಸ್‌ಪಿ, ಟಿಎಸ್‌ಪಿ ಯೋಜನೆಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ. ಮತ್ತೊಂದು ಕಡೆ ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿಕೊಂಡಿದೆ. ಇವುಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಹೋರಾಟ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ED ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಬರಲಿದೆ: ಶ್ರೀರಾಮುಲು

ಸಿದ್ದರಾಮಯ್ಯನವರು ದಲಿತರಿಗೆ ಮೀಸಲಿಟ್ಟ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ತದನಂತರ ಕೂಡ ಸುಮಾರು ಅಷ್ಟೇ ಮೊತ್ತ ವರ್ಗಾಯಿಸಿದ್ದಾರೆ. ಒಟ್ಟಾಗಿ 24,500 ಕೋಟಿ ಮೊತ್ತವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ದೆಹಲಿಯಿಂದ ಬಂದ ಪತ್ರಕ್ಕೆ ಸರ್ಕಾರ ಉತ್ತರ ಕೊಡಬೇಕಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಜು.15 ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನ

ಇದನ್ನು ದಲಿತರಿಗೇ ಬಳಸಿದ್ದೇವೆ, ದುರುಪಯೋಗ ಆಗಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರವು ದಲಿತರಿಗೆ ಅನ್ಯಾಯ ಮಾಡಿದೆ. ಇದು ಅಕ್ಷಮ್ಯ ಅಪರಾಧ. ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ಮುಂದುವರಿಸಲಿದೆ. ಸಿದ್ದರಾಮಯ್ಯನವರು ಅಹಿಂದ ನಾಯಕರು ಎಂದು ಹೇಳಿಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಾರೆ. ದಲಿತರ ಉದ್ಧಾರಕರು ಎಂದು ಹೇಳಿ, ತಾವೇ ದಲಿತರ ಉದ್ಧಾರ ಮಾಡಿರುವುದಾಗಿ ತಮ್ಮ ಬಗ್ಗೆ ತಾವು ಕೊಚ್ಚಿಕೊಳ್ಳುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಆಕಳು ಮೈ ತೊಳೆಯಲು ನದಿಗೆ ಹೋಗಿದ್ದ ಯುವಕ ನೀರುಪಾಲು

Share This Article