RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

Public TV
2 Min Read

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.

ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಅ. 4ರಂದು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಶೀಲಿಸಿ ಕೂಡಲೆ ಅಗತ್ಯ ಕ್ರಮ ವಹಿಸಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ಗೂ ತಾಲಿಬಾನ್‌ಗೂ (Taliban) ಏನೂ ವ್ಯತ್ಯಾಸ ಇಲ್ಲ. ಸರ್ಕಾರಿ ಶಾಲೆಯಲ್ಲಿ ಬೈಠಕ್ ಆಗಬಾರದು. ನಮ್ಮದು ಬಸವ ತತ್ವದ ಮೇಲೆ ನಡೆಯುವ ಸರ್ಕಾರ ಅಂದಿದ್ದಾರೆ.

ನಿಗಾ ಇಡಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ
ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.

Share This Article