ಬಿಎಸ್‍ವೈಗೆ ಹೈಕಮಾಂಡ್ ಖಡಕ್ ಸಂದೇಶ

Public TV
1 Min Read

ಬೆಂಗಳೂರು: ಆಪರೇಷನ್ ಕಮಲದ ಆಡಿಯೋ ವಿವಾದ ಜೋರಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದು, ಸದ್ಯಕ್ಕೆ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕುವಂತೆ ಸೂಚನೆ ನೀಡಿದೆ.

2019ರ ಲೋಕಸಭಾ ಚುನಾವಣೆಯತ್ತ ಗಮನ ಕೊಡಲು ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಿಸಲು ಆಪರೇಷನ್ ಕಮಲ ನಡೆಸಿದ್ದಾರೆ ಎಂಬ ಆರೋಪ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿರುವುದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವಂತೆ ಮಾಡಿದೆ. ಆಪರೇಷನ್ ಆಡಿಯೋದ ಬೆನ್ನಲ್ಲೇ ಈ ಸಂದೇಶ ರವಾನೆ ಆಗಿದ್ದು, ಆಡಿಯೋವನ್ನೇ ಬಿಜೆಪಿ ವಿರುದ್ಧ ಅಸ್ತ್ರವಾಗಿ ಪ್ರಯೋಗ ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಕೂಡ ಆಡಿಯೋ ಬಿಡುಗಡೆ ಮಾಡಿ ಬಿಜೆಪಿಯನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತ್ತು.

ಆಪರೇಷನ್ ಆಡಿಯೋ ಸಂಬಂಧ ಎಸ್‍ಐಟಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಕಳೆದ 2 ದಿನಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಭಾರೀ ಚರ್ಚೆ ನಡೆದಿದೆ. ಇದರ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಬೇಡವೆಂದು ಹೈಕಮಾಂಡ್ ಸೂಚನೆ ನೀಡಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯುವ ಕಡೆ ಗಮನ ಹರಿಸುವಂತೆ ತಿಳಿಸಿದೆ.

https://www.youtube.com/watch?v=s2WxVzZmLyo

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *