ಬೆಂಗಳೂರಲ್ಲಿ ಬಿಜೆಪಿ ನಾಯಕರ ಹೈಡ್ರಾಮಾ- ಸಿಎಂ, ಸಚಿವರ ಕಚೇರಿಗೆ ಬೀಗ ಹಾಕಲು ಯತ್ನ

Public TV
1 Min Read

ಬೆಂಗಳೂರು: ದೆಹಲಿಯಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆ ಮಾಡಿದ್ರೆ, ಇತ್ತ ಬೆಂಗಳೂರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ (BJP Protest) ನಡೆಸಿದೆ.

ಬರಪರಿಸ್ಥಿತಿ ನಿಭಾಯಿಸುವಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ (Vidhanasoudha) ಗಾಂಧಿ ಪ್ರತಿಮೆ ಮುಂದೆ ಬಿಜೆಪಿಗರು ಧರಣಿ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಬಳಿಕ ಸಿಎಂ ಮತ್ತು ಸಚಿವರ ಕೊಠಡಿಗಳಿಗೆ ಬೀಗ ಹಾಕಲು ಬಿಜೆಪಿ (BJP) ನಾಯಕರು ಪ್ರಯತ್ನಿಸಿದ್ರು. ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. ಇದನ್ನೂ ಓದಿ: ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ: ವಿಜಯೇಂದ್ರ ಕಿಡಿ

ಬಿಜೆಪಿಯ ಎಲ್ಲಾ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಭಾರೀ ಹೈಡ್ರಾಮಾನೇ ನಡೆಯಿತು. ಪೊಲೀಸರ ಧೋರಣೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷ ಅಂದರೆ ಬಿಜೆಪಿಯ ಈ ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕರು ಯಾರೂ ಪಾಲ್ಗೊಳ್ಳಲಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಈ ಮಧ್ಯೆ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ವಿಫಲ ಯತ್ನ ಮಾಡಿದ್ರು.

ಇತ್ತ ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನಿಸಿದ್ದು, ಹೈಡ್ರಾಮಾ ನಡೆದಿದೆ. ಈ ಸಂಬಂಧ 27 ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

Share This Article