ರಾಜಸ್ಥಾನದಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ – ಸಿಎಂ ಪಟ್ಟದ ಕುತೂಹಲಕ್ಕೆ ತೆರೆ ಸಾಧ್ಯತೆ

Public TV
1 Min Read

ಜೈಪುರ: ಛತ್ತೀಸ್‌ಗಢ (Chattisgarh) ಮತ್ತು ಮಧ್ಯಪ್ರದೇಶದ (Madhya Pradesh) ಬಳಿಕ ರಾಜಸ್ಥಾನದಲ್ಲಿ (Rajasthan) ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಕುತೂಹಲಕ್ಕೆ ಇಂದು ತೆರೆ ಬೀಳುವ ನಿರೀಕ್ಷೆಗಳಿದೆ.

ರಾಜಸ್ಥಾನದಲ್ಲಿ ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ (BJP) ಶಾಸಕರು ಇಂದು ಜೈಪುರದಲ್ಲಿ (Jaipur) ಸಭೆ ಸೇರಿ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಔಪಚಾರಿಕವಾಗಿ ಆಯ್ಕೆ ಮಾಡಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಮೊದಲಾದ ನಾಯಕರು ಸಿಎಂ ರೇಸ್‌ನಲ್ಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರನ್ನು ಪಕ್ಷವು ವೀಕ್ಷಕರನ್ನಾಗಿ ನೇಮಿಸಿದೆ. ಇದನ್ನೂ ಓದಿ: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

ಇಂದು ವೀಕ್ಷಕರು ಜೈಪುರಕ್ಕೆ ತೆರಳಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಕುರಿತು ಸೋಮವಾರ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ನಾಯಕತ್ವವು ಈ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಮಾಡಲಿದೆ. ಊಟದ ಬಳಿಕ ಔಪಚಾರಿಕ ಸಭೆ ನಡೆಯಲಿದ್ದು, ಇದರಲ್ಲಿ ಶಾಸಕರು ಶಾಸಕಾಂಗ ಪಕ್ಷದ ನಾಯಕ ಅಥವಾ ನಿಯೋಜಿತ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಈಗಾಗಲೇ ವಸುಂಧರ ರಾಜೇ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಭೇಟಿಯಾಗಿ ಲಾಬಿ ಮಾಡಿದ್ದಾರೆ. ಇದನ್ನೂ ಓದಿ: ಶಿವರಾಜ್‌ಸಿಂಗ್‌ ರಾಜ್ಯ ರಾಜಕೀಯ ಅಂತ್ಯ – ಲೋಕಸಭೆಗೆ ಸ್ಪರ್ಧೆ?

Share This Article