ಲೋಕಸಭೆಗೆ ಕಮಲ, ತೆನೆ ಮೈತ್ರಿ ಫೈನಲ್ – ಜೆಡಿಎಸ್‍ಗೆ 4 ಕ್ಷೇತ್ರವಷ್ಟೇ ಬಿಡಲು ಬಿಜೆಪಿ ಒಪ್ಪಿಗೆ

Public TV
2 Min Read

– ಇನ್ನೆರಡು ದಿನಗಳಲ್ಲಿ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lokasabha Election) ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ.

ಇತ್ತೀಚಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು (HD Devegowda) ಮತ್ತು ಕೇಂದ್ರ ಸಚಿವ ಅಮಿತ್ ಶಾ (Amit Shah) ದೆಹಲಿಯಲ್ಲಿ ಸಭೆ ಸೇರಿ ಮೈತ್ರಿ ಸೂತ್ರ ಹೆಣೆದಿದ್ದಾರೆ. ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಬಹುತೇಕ 24+4 ಸೀಟು ಹಂಚಿಕೆ ಸೂತ್ರವೇ ಫೈನಲ್ ಆಗುವ ಸಾಧ್ಯತೆಗಳಿವೆ. ಎಲ್ಲಾ ಸೂತ್ರಗಳಿಗೆ ಒಪ್ಪಿಗೆ ಸಿಕ್ಕಿದರೆ ಸೆಪ್ಟೆಂಬರ್ 10ಕ್ಕೆ ದೋಸ್ತಿ ಡೀಲ್ ಅಧಿಕೃತವಾಗಿ ಪ್ರಕಟವಾಗಬಹುದು ಎನ್ನಲಾಗಿದೆ.

 

ಇದಕ್ಕೆ ಪೂರಕವಾಗಿ ಸೆಪ್ಟೆಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಇವತ್ತು ಬೆಂಗಳೂರಲ್ಲಿ ಮಾತಾಡಿದ ಮಾಜಿ ಸಿಎಂ ಯಡಿಯೂರಪ್ಪ (Yediyurappa) ಮೈತ್ರಿಯ ಗುಟ್ಟನ್ನು ರಟ್ಟು ಮಾಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ಮುಂದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ: ಬಿಎಸ್‌ವೈ

ಮೈತ್ರಿ ಅಧಿಕೃತ ಆದ ಮೇಲೆ ದೇವೇಗೌಡರು ಮತ್ತು ಕುಮಾರಸ್ವಾಮಿಯನ್ನು (Kumaraswamy) ಭೇಟಿ ಮಾಡುತ್ತೇನೆ ಎಂದು ಯಡಿಯೂರಪ್ಪ ಪ್ರಕಟಿಸಿದ್ದಾರೆ. ಮೈಸೂರು ಹಾಗೂ ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸ್ತಿದೆ.

 

ಜೆಡಿಎಸ್ ಮೈತ್ರಿ ಸೂತ್ರ ಏನು?
7+21 ಸೀಟು ಹಂಚಿಕೆ ಸೂತ್ರವನ್ನು ಜೆಡಿಎಸ್‌ ಮುಂದಿಟ್ಟಿದೆ. ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಬೇಡಿಕೆ ಇಟ್ಟಿದೆ.

ಬಿಜೆಪಿ ಮೈತ್ರಿ ಸೂತ್ರ ಏನು?
24+4 ಸೀಟು ಹಂಚಿಕೆ ಸೂತ್ರವನ್ನು ಬಿಜೆಪಿ ಮಾಡಿದೆ. ಹಾಸನ, ತುಮಕೂರು, ಮಂಡ್ಯ ಬಿಟ್ಟು ಕೊಡಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಅಥವಾ ಚಿಕ್ಕಬಳ್ಳಾಪುರ ಪೈಕಿ ಒಂದು ಕ್ಷೇತ್ರ ಜೆಡಿಎಸ್‍ಗೆ ಸಿಗುವ ಸಾಧ್ಯತೆಯಿದೆ.

 

ಕಮಲ-ತೆನೆ ಮೈತ್ರಿಗೆ ಮಂಡ್ಯ ಕಗ್ಗಂಟು
ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು, ಕ್ಷೇತ್ರಕ್ಕೆ `ತೆನೆ’ ಬೇಡಿಕೆ ವ್ಯಕ್ತಪಡಿಸಿದೆ. ಒಂದು ವೇಳೆ ಬಿಜೆಪಿ ಒಪ್ಪಿಗೆ ನೀಡಿದರೆ ಹಾಲಿ ಎಂಪಿ ಸುಮಲತಾ ಅಂಬರೀಶ್ ಭವಿಷ್ಯವೇನು ಎಂಬ ಪ್ರಶ್ನೆ ಎದ್ದಿದೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಸುಮಲತಾ ಬೆಂಬಲ ನೀಡಿದ್ದರು. ಹೀಗಾಗಿ ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಜೆಪಿ ಬಿಟ್ಟುಕೊಡುತ್ತಾ ಎಂಬ ಪ್ರಶ್ನೆ ಎದ್ದಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್