ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

Public TV
1 Min Read

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

Share This Article