ಕಿಡ್ನಿ ಸಮಸ್ಯೆ – ಸಿ.ಟಿ ರವಿ ಆಸ್ಪತ್ರೆಗೆ ದಾಖಲು

Public TV
1 Min Read

ಚಿಕ್ಕಮಗಳೂರು: ಶಾಸಕರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಅನಾರೋಗ್ಯದಿಂದ ತಡರಾತ್ರಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ (Kidney Problem) ಬಳಲುತ್ತಿದ್ದ ಅವರು ಬುಧವಾರ (ಮೇ 10) ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುಗಿಯಿತು ಮತ ಸಮರ, ಶುರುವಾಯ್ತು ಲೆಕ್ಕಾಚಾರ – ಮತಗಟ್ಟೆ ಸಮೀಕ್ಷೆಗಳಲ್ಲಿ `ಕೈ’ ಮುನ್ನಡೆ

ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು (Kidney Stone) ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ. ಇದನ್ನೂ ಓದಿ: ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

Share This Article