ಜಾತಿ ನಿಂದನೆ ಕೇಸ್‌- ಮುನಿರತ್ನಗೆ ಜಾಮೀನು ಮಂಜೂರು

Public TV
1 Min Read

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.

ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ.

ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

 

ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು.  ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದ್ದರು.

 

ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದ್ದರು.

Share This Article