ಮತ್ತೆ ಆಪರೇಷನ್ ಹಸ್ತ ಸದ್ದು; ಡಿಕೆಶಿ ಭೇಟಿಯಾದ ಶಿವರಾಮ್ ಹೆಬ್ಬಾರ್, 30 ನಿಮಿಷಗಳ ಕಾಲ ಮಾತುಕತೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಹಸ್ತದ ಸದ್ದು ಜೋರಾಗ್ತಿದೆ. ನಿನ್ನೆಯಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Shrinivas) ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ಕೊಟ್ಟು ಕೃಷ್ಣಜನ್ಮಾಷ್ಟಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ಬೆನ್ನಲ್ಲೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar), ಡಿಕೆಶಿ ಅವರನ್ನ ಭೇಟಿ ಮಾಡಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಕುಮಾರಕೃಪ ಸರ್ಕಾರಿ ಅತಿಥಿ ಗೃಹದಲ್ಲಿ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ 30 ನಿಮಿಷಗಳ ಮಾತುಕತೆ ನಡೆಸಿದ್ದಾರೆ. ಇಲಾಖೆ ವಿಚಾರವಾಗಿ ಚರ್ಚಿಸಬೇಕು ಅಂತಾ ಡಿಶಿ ಅವರನ್ನ ಭೇಟಿ ಮಾಡಿರುವುದಾಗಿ ಹೇಳಿದ್ದಾರೆ.

ನಿನ್ನೆ ಸಂಜೆ ಮಾಜಿ ಸಂಸದ ಬಿಜೆಪಿ ನಾಯಕ ಎಲ್.ಆರ್ ಶಿವರಾಮೇಗೌಡ (LR ShivarameGowda) ಸಹ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಇದರಿಂದ ರಾಜ್ಯ ರಾಜಕೀಯದಲ್ಲಿ ದೊಡ್ಡಮಟ್ಟದ ಆಪರೇಷನ್ ನಡೆಯುತ್ತೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದನ್ನೂ ಓದಿ: ಮಾಜಿ ಸಚಿವ ವಿಶ್ವನಾಥ್ ಕಾಂಗ್ರೆಸ್ ಸೇರದಂತೆ ಮನವೊಲಿಸಲು ನಾನು ಮುಂದಾಳತ್ವ ವಹಿಸಲ್ಲ: ಹೆಬ್ಬಾರ್

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪೂಜೆಗೆ ಪಾಲ್ಗೊಂಡಿದ್ದ ಡಿಕೆಶಿ, ನಮ್ದು ಆಪರೇಷನ್ ಅಲ್ಲ.. ಕೋ ಆಪರೇಷನ್ ಅಂತ ಹೇಳಿದ್ದರು. ಇನ್ನು ಕಾಂಗ್ರೆಸ್‌ನಿಂದ ಆಫರ್ ಇದೆ.. ಆದ್ರೆ, ಬಿಜೆಪಿ ಬಿಡೋ ಯೋಚನೆ ಮಾಡಿಲ್ಲ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದರು. ಇದನ್ನೂ ಓದಿ: `ಕೈ’ ಹಿಡಿಯಲು ಮುಂದಾದ್ರಾ BJP ಶಾಸಕ – ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್‌ ಹೆಬ್ಬಾರ್ ಹೇಳಿದ್ದೇನು?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್