ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು ಆದರೆ ಫಸ್ಟ್ ಬೆಂಚ್ ಸಿಗಲ್ಲ: ಪರಮೇಶ್ವರ್

Public TV
2 Min Read

ಬೆಂಗಳೂರು: ಬಿಜೆಪಿಯಿಂದ (BJP) ಕಾಂಗ್ರೆಸ್ (Congress) ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwara) ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ.

ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್‌ಶಿಪ್ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಹಿಂದೆ ಪಕ್ಷ ಬಿಟ್ಟು ಹೋದವರು ಕೂಡಾ ಬರಬಹುದು ಎಂದು ಸ್ಪಷ್ಟಪಡಿಸಿದರು.

ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಎಂದರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗದೇ ಹೋದರೂ ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್ ಸಿಗಬೇಕಾದರೆ ತುಂಬಾ ದಿನ ಆಗುತ್ತದೆ ಅಷ್ಟೇ ಎಂದರು.

ನನ್ನ ಜೊತೆ ಶಾಸಕರು ಚರ್ಚೆ ಮಾಡಿರೋ ಬಗ್ಗೆ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದ ಜನತೆ ನಮಗೆ ಅಧಿಕಾರ ಕೊಟ್ಟಿದೆ. ಅವರ ವಿಶ್ವಾಸಕ್ಕೆ ತಕ್ಕಂತೆ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ಇದಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ:  ಉಪೇಂದ್ರ, ಸಚಿವ ಮಲ್ಲಿಕಾರ್ಜುನ ಕೇಸ್ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಜಿ.ಪರಮೇಶ್ವರ್

ಜನರಿಗೆ ಭರವಸೆ ಈಡೇರಿಸೋದು ಒಂದು ಕಡೆಯಾದರೆ ರಾಜಕೀಯ ಮಾಡೋದು ಮತ್ತೊಂದು ಕಡೆ. ಬಿಜೆಪಿ ಅವರು ಕಳೆದ ಬಾರಿ 25 ಸ್ಥಾನ ಪಡೆದಿದ್ದರು. ಈ ಬಾರಿ ನಾವು ಇಷ್ಟು ಸ್ಥಾನ ಪಡೆಯಬೇಕು ಅಂತ ಇದ್ದೇವೆ. ಅದರೆ ಜನ ತೀರ್ಮಾನ ಮಾಡುತ್ತಾರೆ. ಜನರ ಬಳಿ ಹೋಗುತ್ತೇವೆ, ಜನ ತೀರ್ಮಾನ ಮಾಡ್ತಾರೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಮುನ್ನ ಆಪರೇಷನ್ ಕಾಂಗ್ರೆಸ್- ಬೆಂಗ್ಳೂರಿನ ಕೆಲ ಶಾಸಕರಿಗೆ ಗಾಳ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್