ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

Public TV
2 Min Read

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಬಿಜೆಪಿ (BJP) ಎಂಎಲ್‌ಸಿ ರವಿಕುಮಾರ್‌ (N.Ravikumar) ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸ್ವಪಕ್ಷದ ಶಾಸಕ ಬಿ.ಸುರೇಶ್‌ ಗೌಡ (B.Sureshgowda) ಖಂಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆವು ಮಾತನಾಡಿದರು. ಈ ವೇಳೆ, ರವಿಕುಮಾರ್ ಮಾತನಾಡಿದ್ದು ಸರಿಯಲ್ಲ. ಚಿಕ್ಕ ಗುಮಾಸ್ತನಾಗಲಿ ಗೌರವದಿಂದ ಕಾಣಬೇಕು. ಕೋಪದಲ್ಲಿ ಮಾತನಾಡಿ ಗೊಂದಲ ಮಾಡಿಕೊಳ್ಳಬಾರದು. ರವಿಕುಮಾರ್ ಮಾತನಾಡಿದರೆ ಅವರೇ ಸ್ಪಷ್ಟನೆ ಕೊಡಬೇಕು. ಅದನ್ನ ಬಿಜೆಪಿ ಹೇಳಿಕೊಟ್ಟು ಮಾತನಾಡಿಸಿದ್ದಲ್ಲ. ರವಿಕುಮಾರ್ ಹೇಳಿಕೆಯನ್ನ ಖಂಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಡಿವೈಎಸ್‍ಪಿ ಮೇಲೆ ಕಪಾಳ ಮೋಕ್ಷ ಮಾಡಲು ಹೋಗಿದ್ದರು. ವೇದಿಕೆಯಲ್ಲಿ ಸ್ವಾಮೀಜಿ ಪಕ್ಕ ಕುಳಿತಿದ್ದ ಐಎಎಸ್ ಅಧಿಕಾರಿಯನ್ನ ಹೊರಗೆ ಕಳುಹಿಸಿದ್ರು ಎಂದು ಸಿಎಂ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

ರವಿಕುಮಾರ್ ವಿರುದ್ಧ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿ ದೂರು ದಾಖಲಿಸಿದ್ದಾರೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು.

ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದರು. ಇದನ್ನೂ ಓದಿ: ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

Share This Article