ಪಾಕಿಸ್ತಾನಕ್ಕೆ ವಲಸೆ ಹೋಗಿ: ಸೆಂಥಿಲ್ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಕಿಡಿ

Public TV
1 Min Read

ಕಾರವಾರ: ಪಾಕಿಸ್ತಾನಕ್ಕೆ ವಲಸೆ ಹೋಗುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರಿಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದರು. ಇದರಿಂದ ಕೋಪಗೊಂಡಿರುವ ಸಂಸದರು, ಟ್ವೀಟ್ ಮೂಲಕ ಸಸಿಕಾಂತ್ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕೇಂದ್ರದ ನೀತಿಯೇ ರಾಜೀನಾಮೆಗೆ ಕಾರಣ- ಸಸಿಕಾಂತ್ ಸೆಂಥಿಲ್

ಸಸಿಕಾಂತ್ ಸೆಂಥಿಲ್ ಅವರ ಪತ್ರಿಕಾ ಹೇಳಿಕೆಯ ತುಣುಕನ್ನು ಟ್ವೀಟ್ ಮಾಡಿರುವ ಸಂಸದರು, ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು. ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು. ಇದರಲ್ಲಾದರೂ ನಿಯತ್ತು ತೋರಿಸಲಿ ಎಂದು  ತಿಳಿಸಿದ್ದಾರೆ.

ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರಾಗಿದ್ದು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವೀಧರರು. ಸೆಂಥಿಲ್ ಅವರು ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿಯೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದರು. ರಾಜೀನಾಮೆಯ ಕುರಿತಾಗಿ ಅಧಿಕೃತ ಪತ್ರವನ್ನು ಬರೆದಿದ್ದ ಸಸಿಕಾಂತ್ ಸೆಂಥಿಲ್ ಅವರು, ಪ್ರಜಾಪ್ರಭುತ್ವದ ಮೂಲಭೂತ ಅಂಶಗಳಿಗೆ ಹಿಂದೆಂದೂ ಕಾರಣದಂತಹಾ ರೀತಿಯ ಅಪಾಯ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಭಾವಿಸುತ್ತೇನೆ ಎಂಬುವುದನ್ನು ಉಲ್ಲೇಖಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *