ಚನ್ನಪಟ್ಟಣ ಉಪಚುನಾವಣೆ- ಪತ್ನಿ ಸ್ಪರ್ಧೆ ವದಂತಿಗೆ ಡಾ. ಮಂಜುನಾಥ್ ಸ್ಪಷ್ಟನೆ

Public TV
1 Min Read

ಬೆಂಗಳೂರು: ಚನ್ನಪಟ್ಟಣದಲ್ಲಿ ಪತ್ನಿ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ (Dr. Manjunath) ಸ್ಪಷ್ಟನಡ ಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಚನ್ನಪಟ್ಟಣ ಉಪಚುನಾವಣೆ (Channapatna Byelection) ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದರು. ಚನ್ನಪಟ್ಟಣದಲ್ಲಿ ಪತ್ನಿ ಅನಸೂಯ ಸ್ಪರ್ಧೆ ಮಾಡಲ್ಲ. ನೂರಕ್ಕೆ ನೂರರಷ್ಟು ಅನಸೂಯ ಸ್ಪರ್ಧೆ ಮಾಡಲ್ಲ. ಈ ಸುದ್ದಿ ನಮಗೂ ಮುಜುಗರ ತಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದರು.

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್‍ನಿಂದ ಡಿಕೆ ಶಿವಕುಮಾರ್ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಡಿ.ಕೆ ಸಹೋದರರನ್ನು ಕಟ್ಟಿ ಹಾಕಲು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅನಸೂಯ ಅವರನ್ನು ಕಣಕ್ಕಿಳಿಸುವ ಪ್ಲಾನ್ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಇದನ್ನೂ ಓದಿ: ಡೆಂಗ್ಯೂನಿಂದ ಜನ ಸಾಯ್ತಿದ್ರೆ, ಸಚಿವರು ಸ್ವಿಮ್ಮಿಂಗ್ ಪೂಲ್‍ನಲ್ಲಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

Share This Article