ದಿಢೀರ್ ಡಿಕೆಶಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

Public TV
0 Min Read

ಬೆಂಗಳೂರು: ರಾಜಕೀಯ ಬೆಳವಣಿಗೆಯೊಂದರಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  (Tejaswi Surya) ಅವರು ಇಂದು ದಿಢೀರ್ ಆಗಿ ಭೇಟಿಯಾಗಿದ್ದಾರೆ.

ಈ ಸಂಬಂಧ ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಮದು ಬರೆದುಕೊಂಡಿದ್ದಾರೆ.

ಆದರೆ ಈ ಬಗ್ಗೆ ತೇಜಸ್ವಿ ಸೂರ್ಯ ಅವರು ಈ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡಿಲ್ಲ. ಆದರೆ ಡಿಕೆಶಿ ಹಾಗೂ ಸೂರ್ಯ ಭೇಟಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆಯಾಗುತ್ತಿದೆ.

Share This Article