ಶೀಘ್ರದಲ್ಲೇ ಬಿಜೆಪಿ ನೂತನ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ಬಿ.ವೈ ವಿಜಯೇಂದ್ರ

Public TV
1 Min Read

ಚಿಕ್ಕೋಡಿ: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿದ್ದ ಬಿಜೆಪಿ (BJP) ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಸ್ಥಾನವನ್ನು ತುಂಬಲು ಸಮಯ ಬಂದಂತೆ ಕಾಣುತ್ತಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹುಕ್ಕೇರಿಯಲ್ಲಿ ಮುನ್ಸೂಚನೆಯನ್ನು ನೀಡಿದ್ದಾರೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಎರಡನ್ನೂ ಶೀಘ್ರದಲ್ಲೇ ಒಟ್ಟಿಗೆ ಮಾಡಲಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದ ಹಿರೇಮಠದ ದಸರಾ ಉತ್ಸವದಲ್ಲಿ ಭಾಗಿಯಾಗಿದ್ದ ವೇಳೆ ಅವರು ಮಾಧ್ಯಮಗಳ ಮುಂದೆ ಈ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಮೂಲಕ ವಿರೋಧ ಪಕ್ಷದಲ್ಲಿ ಖಾಲಿ ಇದ್ದ ವಿಪಕ್ಷ ನಾಯಕನ ಸ್ಥಾನ ತುಂಬುವ ಬಗ್ಗೆ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಶೀಘ್ರ ಗುಣಮುಖರಾಗಿ – ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಖಂಡಿತ ಇಲ್ಲ. ಯಡಿಯೂರಪ್ಪ (B.S. Yediyurappa) ಹಿರಿಯ ನಾಯಕರಿದ್ದಾರೆ. ಯಡಿಯೂರಪ್ಪ ಸ್ವತಂತ್ರರಾಗಿದ್ದಾರೆ. ಅವರಿಗೆ ಯಾವಾಗ ಸರಿ ಕಾಣುತ್ತದೆಯೋ ಆಗ ಪ್ರವಾಸ ಮಾಡುತ್ತಾರೆ. ಅವರಿಗೆ ಎಲ್ಲಿ ಬೇಕೋ ಅಲ್ಲಿಗೆ ಪ್ರವಾಸ ಮಾಡುತ್ತಾರೆ. ಯಾರೂ ಕೂಡ ಅದನ್ನ ತಡೆಯುವ ಪ್ರಯತ್ನ ಮಾಡುವುದಿಲ್ಲ. ಅಂತಹ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ.

ಹುಕ್ಕೇರಿ ದಸರಾ ಮಹೋತ್ಸವಕ್ಕೆ ಅ.18 ರಂದು ಭಾಗವಹಿಸಬೇಕಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ನಿನ್ನೆ ಲಿಂಗಸೂರಿನಲ್ಲಿ ರಂಭಾಪುರಿ ಶ್ರೀಗಳ ನೇತೃತ್ವದ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದೆ. ಈ ದಿನ ಹುಕ್ಕೇರಿಗೆ ಬಂದು ಆಶೀರ್ವಾದ ಪಡೆದು ಹೋಗಬೇಕೆಂದು ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಟೀಂಗೆ ಸಪೋರ್ಟ್ ಮಾಡೋಕೆ ಹೋಗಿದ್ರಾ – ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್