ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Public TV
1 Min Read

ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರದ ಜನವಿರೋಧಿ ನೀತಿಯೂ ಸೇರಿದಂತೆ ವೈಫಲ್ಯಗಳನ್ನು ಖಂಡಿಸಿ ಜುಲೈ 22ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ (BJP) ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ (N Ravikumar) ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 48 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ಕೊಲೆಗಳು ನಡೆದಿವೆ. ವಿದ್ಯುತ್ ಸೇರಿದಂತೆ ಜೀವನಾವಶ್ಯಕ ಬೆಲೆಗಳು ತೀವ್ರವಾಗಿ ಹೆಚ್ಚಾಗಿದ್ದು, ಜನರು ಜೀವನ ಮಾಡುವುದೇ ದುಸ್ತರವಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್ ಅಲ್ಪಸಂಖ್ಯಾತರ ಪರ ಮಾತ್ರವಲ್ಲ, ಹಿಂದೂಗಳ ವಿರೋಧಿ, ರೈತ ವಿರೋಧಿ, ನೀರಾವರಿ ವಿರೋಧಿ ಮತ್ತು ಶಿಕ್ಷಣ ವಿರೋಧಿಯಾಗಿದೆ. ಕೇಂದ್ರ ಸರ್ಕಾರವನ್ನು ತೆಗಳುವ ಬಜೆಟ್ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್‌ಡಿಕೆ ಶಪಥ

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಭಯೋತ್ಪಾದನಾ ಚಟುವಟಿಕೆಗಳು ಅಂತಾರಾಷ್ಟ್ರೀಯ ವ್ಯಾಪ್ತಿಯನ್ನು ಹೊಂದಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ತನಿಖೆಗಾಗಿ ಎನ್‌ಐಎಗೆ ಹಸ್ತಾಂತರ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ. ಸಭಾಧ್ಯಕ್ಷರು ವಿಧಾನಮಂಡಲದ ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಅಲ್ಲದೆ ಪ್ರತಿಪಕ್ಷವನ್ನು ಹತ್ತಿಕ್ಕಲಾಗಿದೆ. ವಿಧಾನಮಂಡಲದಲ್ಲಿ ಸಭಾಧ್ಯಕ್ಷರು ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಕೋಪಗೊಂಡಿದ್ದರೆ, ಬಿರೇನ್ ಸಿಂಗ್ ವಜಾ ಮಾಡಬಹುದಿತ್ತು: ಖರ್ಗೆ ಟಾಂಗ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್