ಜ.20ಕ್ಕೆ ಬಿಜೆಪಿಗೆ ಹೊಸ ಅಧ್ಯಕ್ಷ

1 Min Read

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ (BJP National Presidnt) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 19ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನ ಪಕ್ಷದ ಹೊಸ ಅಧ್ಯಕ್ಷರ ಹೆಸರು ಘೋಷಿಸಲಾಗುವುದು ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಚುನಾವಣಾಧಿಕಾರಿ ಕೆ.ಲಕ್ಷ್ಮಣ್ (K Lakshman) ಬಿಡುಗಡೆ ಮಾಡಿದ ಸಾಂಸ್ಥಿಕ ಚುನಾವಣಾ ವೇಳಾಪಟ್ಟಿಯ ಪ್ರಕಾರ, ಜನವರಿ 19 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆ ವರೆಗೆ ಪಕ್ಷದ ಮುಖ್ಯಸ್ಥರ ಆಯ್ಕೆಗೆ ನಾಮಪತ್ರ ಸಲ್ಲಿಸಬಹುದು. ಅದೇ ದಿನ ಸಂಜೆ 5 ರಿಂದ 6 ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ಅಂದೇ ಸಂಜೆ 4 ರಿಂದ 5 ರ ವರೆಗೆ ಅಭ್ಯರ್ಥಿಗಳ ನಾಮಪತ್ರ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಜನವರಿ 20 ರಂದು ಅಗತ್ಯವಿದ್ದರೆ ಮತದಾನ (Voting) ನಡೆಯಲಿದೆ, ಅದೇ ದಿನ ಹೊಸ ಚುನಾಯಿತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಲಕ್ಷ್ಮಣ್‌ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಪಕ್ಷದ ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಜೆಪಿ ನಡ್ಡಾ ಅವರು ಬಿಜೆಪಿ ಅಧ್ಯಕ್ಷರನ್ನಾಗಿ ನಬಿನ್ ಅವರನ್ನ ನೇಮಕ ಮಾಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಉನ್ನತ ನಾಯಕತ್ವವು ನಬಿನ್ ಅವರ ಉಮೇದುವಾರಿಕೆಗೆ ಬೆಂಬಲ ಸೂಚಿಸಿದ್ದಾರೆ.

Share This Article