– ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಕರ್ನಾಟಕದ ಪಾಲಿನ ಹಣ ಕೊಡಿಸಲಿ
ಬೆಂಗಳೂರು: ಬಿಜೆಪಿ ಧರ್ಮಸ್ಥಳ ಯಾತ್ರೆಗೆ (Dharamsthala Chalo) ಡಿಸಿಎಂ ಡಿಕೆಶಿ (DK Shivakumar) ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ (Delhi) ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು ಎಂದು ಛೇಡಿಸಿದರು. ಇದನ್ನೂ ಓದಿ: ಸೆ.2 ರಿಂದ ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ
ಸಗಣಿ ಮೇಲೆ ಕಲ್ಲು ಹಾಕಲ್ಲ:
ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಕರೆದುಕೊಳ್ಳುತ್ತಿಲ್ಲ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, ‘ಕಸ, ಸಗಣಿ ಮೇಲೆ ಕಲ್ಲನ್ನು ಹಾಕುವುದಕ್ಕೆ ನಾನು ಇಷ್ಟಪಡುವುದಿಲ್ಲ’ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ: ಅಶೋಕ್