ಸಾಲ-ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‍ಗೆ ಬಿಜೆಪಿ ವ್ಯಂಗ್ಯ

Public TV
1 Min Read

ಬೆಂಗಳೂರು: ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಿಜೆಪಿ (BJP) ಕಿಡಿಕಾರಿದೆ.

ರಾಜ್ಯ ಬಜೆಟ್ ವಿಚಾರವಾಗಿ ಎಕ್ಸ್‍ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ಕಾಂಗ್ರೆಸ್‍ನವರು 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ರೂ. ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ ಎಂದು ಕಿಡಿಕಾರಿದೆ. ಇದನ್ನೂ ಓದಿ: Karnataka Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ? 1 ರೂ. ಹೋಗಿದ್ದು ಎಲ್ಲಿಗೆ?

ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಅಭಿವೃದ್ಧಿಯಲ್ಲಿ ಕರ್ನಾಟಕ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ. ಇದು ಬಜೆಟ್ ಅಲ್ಲ, ಇದು ಕರ್ನಾಟಕ ಜನತೆಯ ಕಿವಿ ಮೇಲೆ ಹೂವಿನ ತೋಟ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಇದನ್ನೂ ಓದಿ: ಕೆಫೆ ಸಂಜೀವಿನಿ: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ನಡೆಸುವ ಕ್ಯಾಂಟೀನ್ ಶುರು

Share This Article