ಯಾವುದೇ ವ್ಯಕ್ತಿಯನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲ್ಲ – ರಾವಣ ಹೇಳಿಕೆಗೆ ಖರ್ಗೆ ಸ್ಪಷ್ಟನೆ

Public TV
2 Min Read

ಅಹಮದಾಬಾದ್: ನಾನು ಯಾವುದೇ ವ್ಯಕ್ತಿಯ ಬಗ್ಗೆ ಟೀಕೆಗಳನ್ನು ಮಾಡುವುದಿಲ್ಲ. ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದಿಲ್ಲ. ರಾಜಕಾರಣವು ರಾಜಕೀಯ ವ್ಯಕ್ತಿಗಳ ಮೇಲಲ್ಲ, ಅವರ ನೀತಿಗಳ ವಿರುದ್ಧ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದರು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ರಾವಣ (Ravan Row) ಎಂದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಗುಜರಾತ್ ಚುನಾವಣೆಯಲ್ಲಿ (Gujarat Election) ಆಡಳಿತಾರೂಢ ಬಿಜೆಪಿ (BJP) ತನ್ನ ವಿರುದ್ಧದ ಟೀಕೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿಗೇನು ರಾವಣನಂತೆ 100 ತಲೆಗಳಿವೆಯೇ- ಮಲ್ಲಿಕಾರ್ಜುನ ಖರ್ಗೆ ಕಿಡಿ

ಬಿಜೆಪಿಯ ರಾಜಕೀಯವು ಸಾಮಾನ್ಯವಾಗಿ ಪ್ರಜಾಪ್ರಭುತ್ವದ ಮನೋಭಾವವನ್ನು ಹೊಂದಿರುವುದಿಲ್ಲ. ಎಲ್ಲಾ ಹಂತದ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಶೈಲಿಯ ಬಗ್ಗೆ ನಾನು ಹಲವಾರು ಉದಾಹರಣೆಗಳನ್ನು ನೀಡಿದ್ದೇನೆ. ಆದರೆ ಅವರು ಚುನಾವಣಾ ಲಾಭಕ್ಕಾಗಿ ನನ್ನ ಹೇಳಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಯಾವುದೇ ವ್ಯಕ್ತಿಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಅಥವಾ ವೈಯಕ್ತಿಕ ಟೀಕೆಗಳನ್ನು ಮಾಡುವುದಿಲ್ಲ. ಏಕೆಂದರೆ ನನಗೆ 51 ವರ್ಷಗಳ ಸಂಸದೀಯ ರಾಜಕೀಯದ ಅನುಭವವಿದೆ. ನಾನು ಬಿಜೆಪಿ ಸರ್ಕಾರದ ಅಭಿವೃದ್ಧಿ, ಹಣದುಬ್ಬರ, ನಿರುದ್ಯೋಗ, ಬಡತನದ ವಿಷಯಗಳ ಬಗ್ಗೆ ಟೀಕಿಸಿದ್ದೇನೆ. ಆದರೆ ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಇದನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – ಅಬ್ಬರದ ಪ್ರಚಾರಕ್ಕೆ ತೆರೆ

181 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಆಪ್ ಕಾಂಗ್ರೆಸ್ ಮತಗಳನ್ನು ವಿಭಜನೆ ಮಾಡಲು ಆಜ್ಞೆಯ ಮೇಲೆ ಕೆಲಸ ಮಾಡುತ್ತಿದೆ. ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಏಕೆಂದರೆ ನಾನು ಸತ್ಯವನ್ನು ಹೇಳಿದರೂ ಅದು ಕಾಂಗ್ರೆಸ್ ವಿರುದ್ಧ ಅಪಪ್ರಚಾರಕ್ಕೆ ಬಳಸಲ್ಪಡುತ್ತದೆ. ಕಾಂಗ್ರೆಸ್ ಮತಗಳನ್ನು ವಿಭಜಿಸಲು ಬಿಜೆಪಿ, ಆಪ್ ಅನ್ನು ತಂದಿದೆ ಎಂದು ನಾನು ಹೇಳುವುದಿಲ್ಲ ಎಂದರು.

ಗುಜರಾತಿನಲ್ಲಿ 27 ವರ್ಷಗಳಿಂದ ಅಧಿಕಾರದಿಂದ ಹೊರಗುಳಿದಿದ್ದ ಕಾಂಗ್ರೆಸ್ ಈ ಬಾರಿ ಮೌನ ಅಭಿಯಾನ ನಡೆಸಿದೆ. ಜನ ಸ್ಪಂದಿಸುತ್ತಿದ್ದಾರೆ. ದಿನೇ ದಿನೇ ಕುಸಿಯುತ್ತಿರುವ ಹಣದುಬ್ಬರ, ನಿರುದ್ಯೋಗ, ಭ್ರಷ್ಟಾಚಾರದಿಂದ ಮೇಲ್ಜಾತಿಯ ಜನರೂ ಈ ಸರ್ಕಾರದಿಂದ ಬೇಸತ್ತಿದ್ದಾರೆ. ಮೌನವಾಗಿ ಜನರು ಬಿಜೆಪಿ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ಮನಸ್ಸು ಮಾಡಿದ್ದಾರೆ. ಆದ್ದರಿಂದ ನಮ್ಮ ಮತದಾರರು ಅದೃಶ್ಯರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: TMC ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ – ರಾಜಕೀಯ ಕೆಸರೆರಚಾಟಕ್ಕೆ ಗ್ರಾಸವಾದ ಘಟನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *