ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

1 Min Read

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ (BJP Worker) ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಕಾರ್ಯಕರ್ತೆಯನ್ನ ಅವರನ್ನ ಬಂಧಿಸಲು ಮುಂದಾಗಿದ್ದರು. ಈ ವೇಳೆ ಪ್ರತಿರೋಧ ತೋರಿದ ಮಹಿಳೆಯ ಬಟ್ಟೆ ಬಿಚ್ಚಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ಸದ್ಯ ಸೋಷಿಯಲ್‌ ಮೀಡಿಯಾದಲ್ಲೂ (Social Media) ಸದ್ದು ಮಾಡ್ತಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ ಕಿಡಿ!

ಮಹಿಳೆ ವಿವಸ್ತ್ರಗೊಳಿಸಿ ಥಳಿಸಲು ಕಾರಣ ಏನು?
ಘಟನೆಗೆ ಹಳೇ ವೈಷಮ್ಯ ಕಾರಣ ಅಂತ ಹೇಳಲಾಗ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು. ಬೂತ್‌ ಅಧಿಕಾರಿಗಳೊಂದಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ ನಮ್ಮ ವೋಟ್‌ ಡಿಲೀಟ್‌ ಮಾಡಿಸಿದ್ದಾರೆ ಅಂತ ಗಲಾಟೆ ಮಾಡಿದ್ದರು. ಹಾಗಾಗಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತಿಕ್ಕಾಟ ನಡೆಯುತ್ತಲೇ ಇತ್ತು. ಇದೇ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರಂತೆ. ಇದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೂ ಪ್ರತಿದೂರು ದಾಖಲಾಗಿತ್ತು.

ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್‌ ಸೆಕ್ಷನ್‌ 307 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನ ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಆಕೆ ಪ್ರತಿರೋಧ ತೋರಿ ಚೀರಾಡಿದ್ದಾರೆ. ಅಷ್ಟಕ್ಕೇ ಪೊಲೀಸರು ಆಕೆಯನ್ನ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ:  ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

ಮಹಿಳೆಯನ್ನ ಥಳಿಸಿದ್ದು ಅಲ್ಲದೇ ಬಂಧನದ ವೇಳೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ

Share This Article