ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಆರೋಪ

Public TV
1 Min Read

ಬೀದರ್: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರಚಾರ ಮಾಡುತ್ತಿದ್ದ ವೇಳೆ ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮೇಲೆ ಬಿಜೆಪಿ ಕಾರ್ಯಕರ್ತರು (BJP Workers) ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ (Eshwara Khandre) ಆರೋಪ ಮಾಡಿದ್ದಾರೆ. ಆದರೆ ಪ್ರಾಥಮಿಕ ಹಂತವಾಗಿ ಮೂರು ಜನ ಸ್ನೇಹಿತರು ವೈಯಕ್ತಿಕ ದ್ವೇಷದಿಂದ ಹಲ್ಲೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಭಾಲ್ಕಿ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನಿಂದ ಈಶ್ವರ್ ಖಂಡ್ರೆ ಸ್ಪರ್ಧೆ ಮಾಡಿದರೆ ಬಿಜೆಪಿಯಿಂದ ಪ್ರಕಾಶ್ ಖಂಡ್ರೆ ಕಣಕ್ಕೆ ಇಳಿದಿದ್ದಾರೆ. ಇದು ಖಂಡ್ರೆ ವರ್ಸಸ್ ಖಂಡ್ರೆ ಬಿಗ್ ಪೈಟ್‌ಗೆ ಭಾಲ್ಕಿ ಕ್ಷೇತ್ರ ಸಾಕ್ಷಿಯಾಗಿದೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಖಂಡ್ರೆ ಬಿಜೆಪಿಯವರು ಸೋಲಿನ ಭಯದಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಭಾಲ್ಕಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಇದನ್ನೂ ಓದಿ: ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

Share This Article