ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

1 Min Read

ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ (Gangavathi) ನಗರದಲ್ಲಿ ನಡೆದಿದೆ.

- Advertisement -

ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ. ಇದನ್ನೂ ಓದಿ:  ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

- Advertisement -

- Advertisement -

ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್‌ ಮರಳುತ್ತಿದ್ದಾಗ 7-8 ಜನ ಮಾರಾಕಾಸ್ತ್ರಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

Share This Article