ಸಿಎಂ ವಿರುದ್ಧ ಹರಿಪ್ರಸಾದ್ ಹೇಳಿಕೆ ಸರಿಯಲ್ಲ, ಈ ಬಗ್ಗೆ ಪಕ್ಷ ನಿಗಾ ವಹಿಸುತ್ತೆ: ಎಂಬಿ ಪಾಟೀಲ್

By
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿಕೆ ಹರಿಪ್ರಸಾದ್ (BK Hariprasad) ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಮಾತನಾಡಿದರೆ ಪಕ್ಷವನ್ನು ವಿರೋಧಿಸಿದಂತೆ: ನಂಜೇಗೌಡ ವಾಗ್ದಾಳಿ

ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿ ಯಾವುದೇ ಅಂತಃಕಲಹ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್ ವೈಯಕ್ತಿಕ ಅಸಮಾಧಾನ ಹೊರಹಾಕ್ತಿದ್ದಾರೆ, ಹೈಕಮಾಂಡ್‌ ನೋಡಿಕೊಳ್ಳುತ್ತೆ – ಸಚಿವ ಬೋಸರಾಜು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್