ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್

Public TV
1 Min Read

ಮೈಸೂರು: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿದೆ. ಪ್ರಯೋಗ ಗುಜರಾತ್‍ನಲ್ಲೂ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಿಳಿಸಿದರು.

ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದೇವೆ. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದರು.

ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂತಹ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದರು. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ – ಅತ್ಯಾಚಾರ ಆರೋಪ ಮಾಡಿದ ಕುಟುಂಬಸ್ಥರು

ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ. ರಾಜ್ಯದ 2023ರ ವಿಧಾನಸಭಾ ಚುನಾವಣೆಗೂ ಅನ್ವಯವಾಗುತ್ತಾ, ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದಾರೆ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಇದನ್ನೂ ಓದಿ: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ

Share This Article
Leave a Comment

Leave a Reply

Your email address will not be published. Required fields are marked *