ಕುಟುಂಬ, ಸಂಸಾರ ತ್ಯಾಗ ಮಾಡಿ ಬಿ.ಎಲ್ ಸಂತೋಷ್‌ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ: ಪ್ರಹ್ಲಾದ್ ಜೋಶಿ

Public TV
1 Min Read

ಹುಬ್ಬಳ್ಳಿ: ಬಿ.ಎಲ್ ಸಂತೋಷ್‌ (BL Santhosh) ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ತಮ್ಮ ಕುಟುಂಬ, ಸಂಸಾರ ತ್ಯಾಗ ಮಾಡಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಈಗಾಗಲೇ ಕಿತ್ತೂರು ಭಾಗದಲ್ಲಿ ಒಂದು ಮೋದಿ ಕಾರ್ಯಕ್ರಮ ನಿಗದಿಯಾಗಿದೆ. ಮೋದಿ ಕಾರ್ಯಕ್ರಮ ಇನ್ನೂ ಎರಡು, ಮೂರು ಜಾಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಹ ಬರಲಿದ್ದಾರೆ ಎಂದರು. ಇದನ್ನೂ ಓದಿ: ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ

ಅಮಿತ್ ಶಾ ಇಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ಬರಲಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಇತರೆ ಪ್ರಮುಖ ನಾಯಕರ ಜೊತೆಗೆ ಸಭೆಯಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಪ್ರಮುಖರ ಸಭೆ ನಡೆಯಲಿದೆ. ಸದ್ಯದ ಚುನಾವಣಾ ಮಾಹಿತಿಯನ್ನು ಶಾ ಪಡೆಯಲಿದ್ದಾರೆ. ಬಳಿಕ ಸುದ್ದಿಗೊಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜೆಡಿಎಸ್‌ಗೆ ಶಾಕ್‌ – ʼಕೈʼ ಅಭ್ಯರ್ಥಿಗೆ ವೋಟ್‌ ಹಾಕಿ ಎಂದ MLC ಭೋಜೇಗೌಡ

Share This Article