ಮಹಿಳೆ ಸ್ನಾನ ಮಾಡುವಾಗ ಕಿಟಕಿಯಿಂದ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ಕಾಮುಕನ ವಿರುದ್ಧ ದೂರು

Public TV
1 Min Read

ಹಾಸನ: ಸ್ನಾನ ಮಾಡುತ್ತಿದ್ದಾಗ ಮಹಿಳೆಯೊಬ್ಬರ (Women) ಫೋಟೋ ತೆಗೆದು, ನನ್ನೊಂದಿಗೆ ಲೈಂಗಿಕವಾಗಿ ಸಹಕರಿಸದಿದ್ದರೇ ನಿನ್ನ ಫೋಟೋ ವೈರಲ್ ಮಾಡ್ತೀನಿ ಅಂತ ಬ್ಲಾಕ್ ಮೇಲ್ ಮಾಡುತ್ತಿದ್ದ ವಿಕೃತ ಕಾಮುಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ (Hassan Police Station) ಮೆಟ್ಟಿಲೇರಿದ್ದಾರೆ.

ನಡೆದಿದ್ದೇನು?
ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಲಕ್ಷ್ಮೀಶ ಎಂಬಾತ, ಮಹಿಳೆಯೊಬ್ಬರು ಸ್ನಾನ ಮಾಡುವಾಗ ಕಿಟಕಿಯಿಂದ ನಗ್ನ ಫೋಟೋಗಳನ್ನ ಕ್ಲಿಕ್ಕಿಸಿದ್ದ. ನಂತರ ಆ ಮಹಿಳೆಗೆ ಫೋಟೋ ಕಳುಹಿಸಿ ಇಂತಿಷ್ಟು ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದ. ಅಲ್ಲದೇ ನನ್ನೊಂದಿನ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲದಿದ್ದರೆ ನಿನ್ನ ಫೋಟೋಗಳನ್ನು ವೈರಲ್ ಮಾಡುತ್ತೀನಿ ಎಂದು ಬೆದರಿಕೆ ಹಾಕುತ್ತಿದ್ದ. ಇದರಿಂದ ಮಹಿಳೆ ಸಂಪೂರ್ಣ ಹೆದರಿದ್ದಳು ಎಂದು ಮೂಲಗಳು ತಿಳಿಸಿವೆ.

ಇದೇ ವಿಚಾರಕ್ಕೆ ಕೆಲ ದಿನಗಳ ಹಿಂದೆ ಲಕ್ಷ್ಮೀಶನಿಗೆ ಗ್ರಾಮದ ಹಿರಿಯರು ಬುದ್ಧಿ ಹೇಳಿದ್ದರು. ಆದರೂ ಬದಲಾಗದ ಕಾಮುಕ, ಮಹಿಳೆಗೆ ಬ್ಲಾಕ್‌ಮೇಲ್‌ ಮಾಡೋದನ್ನ ಮುಂದುವರಿಸಿದ್ದಾನೆ. ಇದನ್ನೂ ಓದಿ: ಉತ್ತರ ಪ್ರದೇಶದ 16 ಲೋಕಸಭಾ ಕ್ಷೇತ್ರಗಳಿಗೆ SP ಅಭ್ಯರ್ಥಿಗಳ ಪಟ್ಟಿ ರಿಲೀಸ್‌ – ಅಖಿಲೇಶ್‌ ಯಾದವ್‌ ಪತ್ನಿಯೂ ಕಣಕ್ಕೆ

ಇದರಿಂದ ಬೇಸತ್ತ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ. ತನಗೆ ತೊಂದರೆಯಾಗುತ್ತಿದೆ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳಲ್ಲಿ ಬಾಂಬ್‌ ಬ್ಲಾಸ್ಟ್‌ – ಇಮ್ರಾನ್‌ ಖಾನ್‌ ಪಕ್ಷದ ಮೂವರ ದುರ್ಮರಣ

Share This Article