ಮೊನ್ನೆ ಪಾಕ್‌ ಪರ ಘೋಷಣೆ, ಇಂದು ಸ್ಫೋಟ- ಗೃಹ ಸಚಿವರ ರಾಜೀನಾಮೆಗೆ ಯತ್ನಾಳ್‌ ಆಗ್ರಹ

By
1 Min Read

– ಬ್ಲಾಸ್ಟ್‌ ಪ್ರಕರಣವನ್ನು NIA ತನಿಖೆಗೆ ಒಪ್ಪಿಸುವಂತೆ ಒತ್ತಾಯ

ಬೆಂಗಳೂರು: ಮೊನ್ನೆ ಪಾಕಿಸ್ತಾನ ಪರ ಘೋಷಣೆ, ಇಂದು ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ (Blast in Rameshwaram Cafe) ನಡೆದಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ರಾಜೀನಾಮೆ ನೀಡುವಂತೆ ಇಡೀ ಕರ್ನಾಟಕ ಆಗ್ರಹಿಸುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೇಳಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರ ಕೆಫೆಯಲ್ಲಿ ಬಾಂಬ್‌ ಸ್ಫೋಟ: ತೇಜಸ್ವಿ ಸೂರ್ಯ ಅನುಮಾನ

ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ. ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿತ್ತು. ಹೀಗಾಗಿ ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಕರ್ನಾಟಕ ಆಗ್ರಹ ಮಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್:‌ ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾಗಿರುವ ಬ್ರೂಕ್‌ಫೀಲ್ಡ್‌ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1:05ಕ್ಕೆ ಕೆಫೆಯ ಕೈ ತೊಳೆಯುವ ಜಾಗದಲ್ಲಿಈ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಬ್ಯಾಟರಿ, ಬೋಲ್ಟ್‌ಗಳು ಪತ್ತೆಯಾಗಿದೆ. ಪೊಲೀಸರ ಜೊತೆ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು, ಭಯೋತ್ಪಾದನಾ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಯುತ್ತಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಹಂತದಲ್ಲಿ ಸಿಲಿಂಡರ್‌ ಸ್ಫೋಟದಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ ಇಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share This Article