ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ – ಕೆಪಿಎಸ್‌ಸಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ (KPSC)  ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.

ಹೌದು, ಇನ್ಮುಂದೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು. ಕೆಪಿಎಸ್‌ಸಿ ವ್ಯಾಪ್ತಿಯ ಎಲ್ಲಾ ಪರೀಕ್ಷೆಗಳನ್ನು ನೀಲಿ ಪೆನ್ನಿನಲ್ಲಿಯೇ ಬರೆಯಬೇಕು ಎಂದು ಸೂಚಿಸಿದೆ.ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್- ಚೊಚ್ಚಲ ಸಿನಿಮಾ ಘೋಷಿಸಿದ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ

ಫೆಬ್ರವರಿ 16 ರಿಂದ ನಡೆಯುವ ಎಲ್ಲಾ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಪೆನ್ನು ಕಡ್ಡಾಯ. ಇಲ್ಲಿಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನಿನಿಂದ ಪರೀಕ್ಷೆ ಬರೆಯಬಹುದು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೆ ಇದೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ, ಕಪ್ಪು ಬಣ್ಣದ ಪೆನ್ನನ್ನು ಬಳಸದಿರಲು ತಿಳಿಸಿದೆ.

ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ನು ಮಾತ್ರ ಬಳಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಇಬ್ಬರ ಜಗಳ 3ನೇಯವರಿಗೆ ಲಾಭ; ಕಾಂಗ್ರೆಸ್‌-ಆಪ್‌ ಕಿತ್ತಾಟ ಬಿಜೆಪಿಗೆ ವರದಾನ ಆಗಿದ್ಹೇಗೆ?

Share This Article