ಬೆಂಗಳೂರು: ಬಿಬಿಎಂಟಿಸಿ ಬಸ್‍ವೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರವ ಘಟನೆ ಜಯನಗರದ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.
ಕೆಎ 01 ಎಫ್‍ಎ 1492 ಸಂಖ್ಯೆಯ ಬಸ್ ಬನಶಂಕರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಹೋಗುತ್ತಿತ್ತು. ರಾತ್ರಿ 8.40ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಜಯನಗರ ಮೆಟ್ರೋ ಕಾಮಗಾರಿ ನಡೆಯುವ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಟ್ರಾಫಿಕ್ ಪೊಲೀಸ್‍ರು ಸ್ಥಳಕ್ಕೆ ತೆರಳಿ ಗಾಯಗೊಂಡವರನ್ನು ಕೃಷ್ಣಾ ಸೇವಾಶ್ರಮ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭಿಸಿದೆ. ಈ ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ ನೋಟಕ್ಕೆ ತಿಳಿದು ಬಂದಿದೆ. ತನಿಖೆ ಬಳಿಕ ನಿಖರ ಮಾಹಿತಿ ಲಭಿಸಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv