ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

Public TV
2 Min Read

ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ಭಯೋತ್ಪಾದಕರ ದಾಳಿಯಲ್ಲಿ 27 ಮಂದಿ ಮೃತಪಟ್ಟಿರೋ ಬಗ್ಗೆ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ವಿಷಾದ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದಕರಿಗೆ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಹಾಗೇ ಪಾಠ ಕಲಿಸಬೇಕು ಎಂದು ಅನುಪಮ್ ಖೇರ್ (Anupam Kher) ಉಗ್ರರ ದಾಳಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

ಈ ಬಗ್ಗೆ ಅನುಪಮ್‌ ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

 

View this post on Instagram

 

A post shared by Anupam Kher (@anupampkher)

ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದು ಹಿಂದೂ ಕಾಶ್ಮೀರಿ ಪಂಡಿತ್‌ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವ ಅನುಪಮ್‌ ಖೇರ್‌ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಷ್ಟೇ ಅಲ್ಲ, ಉಗ್ರರ ಈ ನೀಚ ಕೃತ್ಯದ ಬಗ್ಗೆ ಕಲಾವಿದರಾದ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್‌ ಚರಣ್‌, ರವೀನಾ ಟಂಡನ್‌, ಸೋನು ಸೂದ್‌, ಸಂಜಯ್‌ ದತ್‌, ಅನುಷ್ಕಾ ಶರ್ಮಾ ಸೇರಿದಂತೆ ಅನೇಕರು ಖಂಡಿಸಿದ್ದಾರೆ.

Share This Article