ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

Public TV
1 Min Read

ಕಾಂತಾರ (Kantara), ಕೆಜಿಎಫ್ 2, ಸಲಾರ್ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಸಂಸ್ಥೆ ಕಡೆಯಿಂದ ಈಗ ಗುಡ್ ನ್ಯೂಸ್ ಸಿಕ್ಕಿದೆ. ಬಾಲಿವುಡ್‌ನ ಖ್ಯಾತ ನಟ ಹೃತಿಕ್ ರೋಷನ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ. ಇದನ್ನೂ ಓದಿ:ಸೋಷಿಯಲ್ ಮೀಡಿಯಾದಿಂದ ದೀಪಿಕಾ ದಾಸ್ ದಿಢೀರ್ ಬ್ರೇಕ್- ಫ್ಯಾನ್ಸ್‌ಗೆ ಶಾಕ್

ಹೃತಿಕ್ ಅವರನ್ನು ಗ್ರೀಕ್ ಗಾಢ್ ಎಂದು ಕರೆಯುತ್ತಾರೆ. ಅವರು ಅನೇಕರ ಮನಗೆದ್ದಿದ್ದಾರೆ. ಹೃತಿಕ್ ರೋಷನ್ ಅವರು ಹೊಂಬಾಳೆ ಫಿಲಂಸ್ (Hombale Films) ಜೊತೆ ಕೈಜೋಡಿಸಿದ್ದಾರೆ. ನಾವು ಅವರನ್ನು ಸ್ವಾಗತಿಸಲು ಹೆಮ್ಮೆಪಡುತ್ತೇವೆ ಎಂದು ಹೊಂಬಾಳೆ ಸಂಸ್ಥೆ ಅನೌನ್ಸ್ ಮಾಡಿದೆ. ಸದ್ಯದಲ್ಲೇ ಈ ಚಿತ್ರದ ನಿರ್ದೇಶಕರ ಕುರಿತು ಹೆಚ್ಚಿನ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ತಿಳಿಸಲಿದೆ. ಇದನ್ನೂ ಓದಿ:ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ

ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿದೆ. ಈಗ ಹೃತಿಕ್ ರೋಷನ್ ಅವರಂತಹ ಪ್ರತಿಭಾವಂತ ನಟರೊಂದಿಗೆ ಕೈಜೋಡಿಸಿದ್ದು, ದೇಶದ ಗಡಿಗಳನ್ನು ಮೀರಿ ಪ್ರಪಂಚದಾದ್ಯಂತ ಕಥೆಗಳನ್ನು ತಲುಪಿಸುವತ್ತ ಹೊಸ ಹೆಜ್ಜೆ ಇಟ್ಟಿದೆ.

Share This Article