ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಭಾವ ನಿಧನ- ಸಹೋದರಿ ಸ್ಥಿತಿ ಗಂಭೀರ

Public TV
1 Min Read

ಬಾಲಿವುಡ್ (Bollywood) ನಟ, ಮಿರ್ಜಾಪುರ ವೆಬ್ ಸಿರೀಸ್ ಖ್ಯಾತಿಯ ಪಂಕಜ್ ತ್ರಿಪಾಠಿ (Pankaj Tripathi) ಅವರ ಬಾವ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾರೆ. ಜಾರ್ಖಂಡ್‌ನ ನಿರ್ಸಾದಲ್ಲಿರುವ ಜಿಟಿ ರಸ್ತೆಯಲ್ಲಿ ಏ.20ರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಂಕಜ್ ತ್ರಿಪಾಠಿ ಬಾವ ರಾಜೇಶ್ ತಿವಾರಿ ಮೃತಪಟ್ಟಿದ್ದಾರೆ. ಇನ್ನು ನಟನ ಸಹೋದರಿ ಸರಿತಾ ತಿವಾರಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ.

PANKAJ TRIPATHI

ಪಂಕಜ್ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಅವರ ಪತಿ ರಾಜೇಶ್ ತಿವಾರಿ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿ ವೇಗದಲ್ಲಿ ಇದ್ದಿದ್ದರಿಂದ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ತೀವ್ರತೆಗೆ ರಾಜೇಶ್ ತಿವಾರಿ ನಿಧನರಾಗಿದ್ದಾರೆ. ಕಾರಿನ ಒಳಗಿದ್ದ ರಾಜೇಶ್ ಮತ್ತು ಸರಿತಾ ಅವರನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆದಿದ್ದಾರೆ. ಇದನ್ನೂ ಓದಿ:‘ವೀರ ಮದಕರಿ’ ಬಾಲನಟಿ ಈಗ ನಾಯಕಿ- ಮಹೇಶ್ ಬಾಬು, ರಕ್ಷಿತ್ ಸಿನಿಮಾದಲ್ಲಿ ಜೆರುಶಾ

ಅಪಘಾತದ ಬಳಿಕ ಕೂಡಲೇ ಪಂಕಜ್ ಅವರ ಸಹೋದರಿ ಸರಿತಾ, ಭಾವ ರಾಜೇಶ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟು ಹೊತ್ತಿಗಾಗಲೇ ರಾಜೇಶ್ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಸರಿತಾ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕಂಡಿಷನ್ ಕ್ರಿಟಿಕಲ್ ಆಗಿದೆ.

ಕೆಲ ತಿಂಗಳುಗಳ ಹಿಂದೆ ಪಂಕಜ್ ಅವರ ತಂದೆ ನಿಧನರಾಗಿದ್ದರು. ಈ ಬೆನ್ನಲ್ಲೇ ಈ ಘಟನೆ ನಡೆದಿರುವುದು ಅವರ ಕುಟುಂಬಕ್ಕೆ ಶಾಕ್ ಕೊಟ್ಟಿದೆ. ಪಂಕಜ್ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Share This Article