ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಕೇಸ್: ಮೂವರು ಶಂಕಿತರು ವಶಕ್ಕೆ

Public TV
1 Min Read

ನಟನ ಕುತ್ತಿಗೆ ಕೈ ಸೇರಿ 6 ಕಡೆ ಗಾಯ

ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.‌

ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದ ಆರೋಪದಲ್ಲಿ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನೂ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ಅಷ್ಟಕ್ಕೂ ಆಗಿದ್ದೇನು?

ಮುಂಬೈನ ಬಾಂದ್ರಾದಲ್ಲಿರುವ ನಟನ ನಿವಾಸಕ್ಕೆ ತಡರಾತ್ರಿ ದರೋಡೆ ಮಾಡಲು ಕೆಲ ದುಷ್ಕರ್ಮಿಗಳು ನುಗ್ಗಿದ್ದಾರೆ. ಈ ವೇಳೆ, ದರೋಡೆಕೋರನಿಗೆ ಪ್ರತಿರೋಧ ತೋರುವಾಗ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ, ಸೈಫ್ ಕುತ್ತಿಗೆ, ಕೈ ಸೇರಿ 6 ಕಡೆ ಗಾಯವಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಹೆಚ್ಚು ರಕ್ತಸ್ರಾವ ಆಗಿರುವ ಹಿನ್ನೆಲೆ ಕೂಡಲೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ನಡೆದಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕರೀನಾ ಕಪೂರ್ ಮತ್ತು ಮಕ್ಕಳು ಸೇಫ್ ಆಗಿದ್ದಾರೆ.

Share This Article