ಇಡಿ ಶಾಕ್‌ ಬೆನ್ನಲ್ಲೇ ಸಲ್ಮಾನ್‌ ಖಾನ್‌ಗೆ ಮನೆಗೆ ಶಿಲ್ಪಾ ಶೆಟ್ಟಿ ಭೇಟಿ

Public TV
2 Min Read

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾಗೆ (Raj Kundra) ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬೆನ್ನಲ್ಲೇ, ಶಿಲ್ಪಾ ಶೆಟ್ಟಿ ಅವರು ಸಲ್ಮಾನ್ ಮನೆಗೆ ಭೇಟಿ ನೀಡಿದ್ದಾರೆ.

 

View this post on Instagram

 

A post shared by Viral Bhayani (@viralbhayani)

ನಟ ಸಲ್ಮಾನ್ ಖಾನ್ ಅವರ ಮನೆಯ ಮುಂದೆ ಇತ್ತೀಚೆಗಷ್ಟೇ ಗುಂಡಿನ ದಾಳಿ ಮಾಡಲಾಗಿತ್ತು. ಆ ಬಳಿಕ ಅವರ ಆಪ್ತರು ಮತ್ತು ಅಭಿಮಾನಿಗಳಿಗೆ ಆತಂಕ ಹೆಚ್ಚಿಸಿದೆ. ಹಾಗಾಗಿ ಸಲ್ಮಾನ್ ಖಾನ್ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಸಲುವಾಗಿ ಶಿಲ್ಪಾ ಶೆಟ್ಟಿ ಮತ್ತು  ಅವರ ತಾಯಿ ಸುನಂದಾ ಮುಂಬೈನ ಬಾಂದ್ರಾದಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ:‘ಉತ್ತರಕಾಂಡ’ ಡಾಲಿಗೆ ತಮಿಳು ನಟಿ ಐಶ್ವರ್ಯಾ ರಾಜೇಶ್ ಜೋಡಿ

ಇಬ್ಬರಿಗೂ ವೈಯಕ್ತಿಕವಾಗಿ ಸಂಕಷ್ಟದ ಸಮಯ ಎದುರಾಗಿದೆ. ಇಂದು (ಏ.18) ಸಲ್ಮಾನ್ ಖಾನ್ ಮನೆಗೆ ಬರುವ ಮುನ್ನ ಇಡಿ ದಾಳಿ ನಡೆದಿದೆ. 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಳ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.

ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ.

ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

Share This Article