‘ಪುಷ್ಪ 2’ಗೆ ಹೆದರಿ ಸೈಡಿಗೆ ಹೋದ ಬಾಲಿವುಡ್ ಸಿಂಗಂ

Public TV
1 Min Read

ಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಅದೇ ರೀತಿಯ ಬಾಲಿವುಡ್ ನ ಹೆಸರಾಂತ ನಟ ಅಜಯ್ ದೇವಗನ್ (Ajay Devgan) ನಟನೆಯ ಸಿಂಗಂ ಅಗೇನ್ ಚಿತ್ರ ಕೂಡ ಅದೇ ದಿನಾಂಕದಂದು ರಿಲೀಸ್ ಆಗಬೇಕಿತ್ತು. ಆದರೆ, ಸಿಂಗಂ (Singam Again) ಸೈಡ್ ಗೆ ಹೋಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಪುಷ್ಪ 2 ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಂತೆ ಸಾವಿರಾರು ಕೋಟಿ ರೂಪಾಯಿ ವ್ಯಾಪಾರ ಮಾಡುವ ಶಕ್ತಿ ಈ ಚಿತ್ರಕ್ಕಿದೆಯಂತೆ. ಅಲ್ಲದೇ, ದೊಡ್ಡ ಮಟ್ಟದಲ್ಲಿ ಮತ್ತು ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಸಿಂಗಂ ಅಗೇನ್ ಚಿತ್ರದ ರಿಲೀಸ್ ಅನ್ನು ಮುಂದೂಡಿಕೆ ಮಾಡುವ ಯೋಚನೆ ಮಾಡಲಾಗಿದೆಯಂತೆ.

 

ರೋಹಿತ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಗಂ ಅಗೇನ್, ಅನೇಕ ಹೆಸರಾಂತ ಕಲಾವಿದರು ಇದ್ದಾರೆ. ಆದರೂ, ರೋಹಿತ್ ಶೆಟ್ಟಿ ತಮ್ಮ ಸಿನಿಮಾವನ್ನು ಪುಷ್ಪ 2 ಎದುರು ರಿಲೀಸ್ ಮಾಡಲು ಮನಸ್ಸು ಮಾಡುತ್ತಿಲ್ಲ ಎನ್ನುವುದು ಬಿಟೌನ್ ಸಮಾಚಾರ.

Share This Article