ಬಾಲಿವುಡ್ ಸ್ಟಾರ್‌ ರಣ್‌ವೀರ್ ಸಿಂಗ್ ಭೇಟಿಯಾದ ಅರವಿಂದ್ ಕೆಪಿ

Public TV
1 Min Read

ಬಿಗ್ ಬಾಸ್ (Bigg Boss) ಖ್ಯಾತಿಯ ಅರವಿಂದ್ ಕೆಪಿ (Aravind Kp) ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ನೆಚ್ಚಿನ ನಟ ರಣ್‌ವೀರ್ ಸಿಂಗ್ (Ranveer Singh) ಅವರನ್ನ ಭೇಟಿಯಾದ ಖುಷಿಯಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಣ್‌ವೀರ್ ಸಿಂಗ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

ಮೋಟೋ ಜಿಪಿ (MotoGp 2023) ಬೈಕ್ ರೇಸ್ ಶೋಗಾಗಿ ಉತ್ತರಪ್ರದೇಶದ ಬುದ್ಧ ಅಂತರಾಷ್ಟ್ರೀಯ ಸರ್ಕ್ಯೂಟ್‌ನಲ್ಲಿ ಆಯೋಜಿಸಲಾಗಿತ್ತು. ಈ ಬೈಕ್ ರೇಸ್ ಶೋಗಾಗಿ ಬಿಗ್ ಬಾಸ್ ಅರವಿಂದ್ ಕೆಪಿ ಅವರು ಭಾಗಿಯಾಗಿದ್ದರು. ಈ ವೇಳೆ ಬಾಲಿವುಡ್ ಸ್ಟಾರ್ ನಟ ರಣ್‌ವೀರ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಒಂದೊಳ್ಳೆಯ ಸಮಯ ಕಳೆದಿದ್ದಾರೆ. ಈ ಸಂದರ್ಭದ ಫೋಟೋ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿ, ಫ್ಯಾನ್ ಭಾಯ್ ಮೂಮೆಂಟ್ ಎಂದು ರಣ್‌ವೀರ್‌ ಮೇಲಿನ ಅಭಿಮಾನವನ್ನ ಅರವಿಂದ್ ವ್ಯಕ್ತಪಡಿಸಿದ್ದಾರೆ. ಅರವಿಂದ್ ನಯಾ ಪೋಸ್ಟ್ ಸಖತ್ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

‘ಅರ್ದಂ ಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ ಅರವಿಂದ್ ನಾಯಕ ನಟನಾಗಿ ಎಂಟ್ರಿ ಕೊಡ್ತಿದ್ದಾರೆ. ದಿವ್ಯಾ ಉರುಡುಗ (Divya Uruduga)  ಜೊತೆ ತೆರೆಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ.

ರಿಯಲ್ ಲೈಫ್‌ನಲ್ಲೂ ದಿವ್ಯಾ-ಅರವಿಂದ್ ಪ್ರೇಮಿಗಳಾಗಿದ್ದು, ಸಿನಿಮಾ ರಿಲೀಸ್ ಬಳಿಕ ಹಸೆಮಣೆ ಏರಲಿದ್ದಾರೆ. ಬಿಗ್ ಬಾಸ್ (Bigg Boss Kannada) ಪರಿಚಿತರಾದ ಈ ಜೋಡಿ ಸದ್ಯದಲ್ಲೇ ಮದುವೆ ಬಗ್ಗೆ ಅಧಿಕೃತ ಅಪ್‌ಡೇಟ್ ನೀಡಲಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್