ಮಣಿಪುರದಲ್ಲಿ ಬಾಂಬ್‌ ಸ್ಫೋಟ – ಬಿಜೆಪಿ ಮಾಜಿ ಶಾಸಕನ 2ನೇ ಪತ್ನಿ ದಾರುಣ ಸಾವು!

Public TV
1 Min Read

ಇಂಫಾಲ್‌: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ (Bomb Blast) ಬಿಜೆಪಿ ಮಾಜಿ ಶಾಸಕರ ಪತ್ನಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಯಿಕುಲ್ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಯಮ್‌ಥಾಂಗ್ ಹಾಕಿಪ್ (Yamthong Haokip) ಅವರ ಮನೆಯ ಪಕ್ಕದಲ್ಲೇ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!

ಹೌಕಿಪ್ ಅವರ 2ನೇ ಪತ್ನಿ ಸಪಂ ಚಾರುಬಾಲಾ ಅವರು ಸ್ಫೋಟದಲ್ಲಿ ಗಾಯಗೊಂಡ ನಂತರ ಅವರನ್ನು ಸಾಯಿಕುಲ್‌ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದಾಗ ಹಾಕಿಪ್ ಅವರ ಮನೆಯಲ್ಲೇ ಇದ್ದರು.‌ ಆದ್ರೆ ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಂಬ್‌ ಸ್ಫೋಟ ಸಂಭವಿಸಿದ್ದು ಹೇಗೆ ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

Share This Article