ಅಮಿತ್ ಶಾ ಭೇಟಿ ರದ್ದಾದ ಪ್ರದೇಶದಲ್ಲಿ ಬಾಂಬ್ ಸ್ಫೋಟ – ಐವರಿಗೆ ಗಾಯ

Public TV
1 Min Read

– ರಾಮನವಮಿ ಹಿಂಸಾಚಾರ ನಡೆದ 1 ದಿನದ ಬಳಿಕ ಘಟನೆ

ಪಾಟ್ನಾ: ರಾಮನವಮಿಯ (Ram Navami) ಹಿಂಸಾಚಾರದ (Violence) ಬಳಿಕ ಬಿಹಾರದಲ್ಲಿ (Bihar) ಶನಿವಾರ ಮತ್ತೆ ಘರ್ಷಣೆ ವರದಿಯಾಗಿದೆ. ಬಿಹಾರದ ಸಸಾರಾಮ್ (Sasaram) ಪಟ್ಟಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು (Bomb Blast), ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಸಸಾರಾಮ್ ಡಿಎಂ ಈ ಬಗ್ಗೆ ಮಾಹಿತಿ ನೀಡಿದ್ದು, ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟವಾಗಿದೆ. ಗಾಯಾಳುಗಳನ್ನು ಬಿಹೆಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಘಟನೆ ಬಗ್ಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

ಇದಕ್ಕೂ ಮುನ್ನ ಮಾರ್ಚ್ 31 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಬೇಕಿದ್ದ ನಳಂದದ ಬಿಹಾರಶರೀಫ್, ರೋಹ್ಯಾಸ್‌ನ ಸಸಾರಾಮ್‌ನಲ್ಲಿ ಘರ್ಷಣೆ ನಡೆದಿತ್ತು. ಜಿಲ್ಲೆಯಲ್ಲಿ ಘರ್ಷಣೆ ನಡೆದಿದ್ದ ಹಿನ್ನೆಲೆ ಸೆಕ್ಷನ್ 144 ಹೇರಲಾಗಿತ್ತು. ಮಾತ್ರವಲ್ಲದೇ ಅಮಿತ್ ಶಾ ಅವರ ಸಸಾರಾಮ್ ಭೇಟಿಯನ್ನೂ ರದ್ದುಗೊಳಿಸಲಾಗಿತ್ತು.

ಪೊಲೀಸರ ಪ್ರಕಾರ ರಾಮನವಮಿ ಆಚರಣೆ ವೇಳೆ ಹಿಂಸಾಚಾರ ನಡೆದಿರುವ ಹಿನ್ನೆಲೆ ರಾಜ್ಯಾದ್ಯಂತ ಕೆಲ ಭಾಗಗಳಿಂದ 45 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಸಸಾರಾಮ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 18 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪ್ರಮುಖ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿಲ್ಲ ಅಭ್ಯರ್ಥಿಗಳು!

Share This Article