ಬೀದರ್: ಜಿಲ್ಲೆಯ ಐತಿಹಾಸಿಕ ಗುರುದ್ವಾರಕ್ಕೆ (Gurudwara) ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಬೆದರಿಕೆ ಬಂದಿದೆ.
ಶನಿವಾರ ಬೆದರಿಕೆ ಮೇಲ್ ಬಂದ ಬೆನ್ನಲ್ಲೇ ಗುರುದ್ವಾರದ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗುರುದ್ವಾರದ ಅಮೃತಕುಂಡ, ಸರೋವರ, ಯಾತ್ರಿ ನಿವಾಸದಲ್ಲಿ ಬಾಂಬ್ ಬ್ಲಾಸ್ಟ್ ನಡೆಯಲಿದೆ ಎಂದು ವಕೀಲ ಅಲೀಂ ಅಲ್ ಬುಕಾರಿ ಎಂಬ ವ್ಯಕ್ತಿಯಿಂದ ಮೇಲ್ ಬಂದಿದೆ. ಇದನ್ನೂ ಓದಿ: ಸಾಧನಾ ಸಮಾವೇಶ ಮುಗಿಸಿ ವಾಪಸ್ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು
ಈ ಕುರಿತು ಗುರುದ್ವಾರದ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕಾಡ್ ಸೇರಿ ವಿಶೇಷ ತಂಡದಿಂದ ತೀವ್ರ ಪರಿಶೀಲನೆ ಮಾಡಲಾಗುತ್ತಿದೆ.
ಎಸ್ಪಿ, ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸೇರಿ 50ಕ್ಕೂ ಹೆಚ್ಚು ಪೊಲೀಸರಿಂದ ಪರಿಶೀಲನೆ ಮಾಡಲಾಗುತ್ತಿದ್ದು, ಪೊಲೀಸರ ಪರಿಶೀಲನೆ ವೇಳೆ ಯಾವುದೇ ರೀತಿ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ತಮಿಳುನಾಡಿನ ಡ್ರಗ್ಸ್ ಸ್ಮಗ್ಲರ್ ಜಾಫರ್ ಸಾದಿಕ್, ಕೃತಿಗಾ ಉದಯನಿಧಿ ಹೆಸರು ಮೇಲ್‌ನಲ್ಲಿ ಉಲ್ಲೇಖಿಸಲಾಗಿದ್ದು, ನಿವೇತಾ ಪೇತುರಾಜ್, ಉದಯನಿಧಿ ಪ್ರಕರಣಗಳನ್ನು ಬೇರೆಡೆ ಸೆಳೆಯಲು ಸ್ಫೋಟ ಎಂದು ಮೇಲ್ ಕಳಿಸಲಾಗಿದೆ.
ಪಾಕ್‌ನ ಐಎಸ್‌ಐ ಸೆಲ್ಸ್‌ಗಳು ಬಾಂಬ್ ಸ್ಫೋಟದ ಸಂಚು ರೂಪಿಸಿವೆ ಎಂದು ಹೇಳಲಾಗುತ್ತಿದ್ದು, ಭಕ್ತರ ಮೈಕ್ರೋ ಮೊಬೈಲ್ ಫೋನ್ ಸಿಗ್ನಲ್ ಬಳಸಿ ಸ್ಫೋಟಗೊಳಿಸಲಿದ್ದಾರೆಂದು ಮೇಲ್‌ನಲ್ಲಿ ಬರೆಯಲಾಗಿದೆ.ಇದನ್ನೂ ಓದಿ: ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ