ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

Public TV
1 Min Read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.

ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸೋಮವಾರ ಶಾಲೆಯ ಇ-ಮೇಲ್ ಚೆಕ್ ಮಾಡಿದ ವೇಳೆ ಬೆದರಿಕೆ ಪತ್ರ ಬಂದಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಸೆ.3ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಕೇಂದ್ರ ಉದ್ಘಾಟಿಸಲಿರುವ ಯೋಗಿ

 

ಬೆದರಿಕೆ ಪತ್ರ ಪತ್ತೆಯಾಗುತ್ತಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಫೋಟೋ – ಕೆಲಸದಿಂದ ಪೌರಕಾರ್ಮಿಕ ವಜಾ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *