ಡಿಕೆಶಿ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ – ಸ್ಥಳಕ್ಕೆ ಭೇಟಿ ನೀಡಿ ಖುದ್ದು ಮಾಹಿತಿ ಪಡೆದ ಡಿಸಿಎಂ

Public TV
3 Min Read

– ಯಾವಾಗಲಾದ್ರೂ ನಿಜವಾಗಿಯೂ ಬಾಂಬ್‌ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat)  ಹಿನ್ನೆಲೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜಕೀಯ ನಾಯಕರೂ ಫುಲ್ ಅಲರ್ಟ್ ಆಗಿದ್ದಾರೆ. ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್‌ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ (DK Shivakumar) ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀವ್ ಬೇಬಿ ಸಿಟ್ಟಿಂಗ್‌ಗೆ ಇ-ಮೇಲ್ ಬಾಂಬ್ ಬೆದರಿಕೆ (E-Mail Bomb Threat) ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್‌ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.

ಇನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಅವರೂ ಸಹ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Bomb Threat: ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ; ಖಾರಿಜೈಟ್ಸ್ ಹೆಸರಲ್ಲಿ ಇ-ಮೇಲ್

ಶಾಲೆಗಳಿಗೆ ರಜೆ:
ಬಾಂಬ್ ಬೆದರಿಕೆ ಕೇಳಿಬಂದ ಕೂಡಲೇ ಆತಂಕಗೊಂಡ ಪೋಷಕರು ಶಾಲೆ ಬಳಿಗೆ ದೌಡಾಯಿಸಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ. ಪೊಲೀಸ್ ತೀವ್ರ ತಪಾಸಣೆ ಕೈಗೊಂಡಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಿ ಮಕ್ಕಳನ್ನು ಪೋಷಕರೊಂದಿಗೆ ಕಳುಹಿಸಿಕೊಡಲಾಗುತ್ತಿದೆ.

ಬಾಂಬ್ ಸ್ಕ್ವಾಡ್ ಆಗಮನ:
ಇನ್ನೂ ಬಾಂಬ್ ಬೆದರಿಕೆ ಕೇಳಿಬಂದ ಎಲ್ಲಾ ಶಾಲೆಗಲ್ಲಿ ಈ ತೀವ್ರ ತಪಾಸಣೆ ನಡೆಯುತ್ತಿದ್ದು, ತುಮಕೂರಿನಿಂದ ಬಂದ ಬಾಂಬ್ ಸ್ಕ್ವಾಡ್ ಸಹ ಕರೆಸಲಾಗಿದೆ. ಯಲಹಂಕ 2 ಶಾಲೆಗಳು, ಭಾರತೀನಗರ ಸೆಂಟ್ ಜಾನ್ಸ್ ಸ್ಕೂಲ್, ಕೆಂಗೇರಿಯ ಚಿತ್ರಕೂಟ ಶಾಲೆಗಳಿಗೂ ಇಮೇಲ್ ಬೆದಿಕೆ ಬಂದಿದೆ. ಇದನ್ನೂ ಓದಿ: ಎಲ್ಲಾ ಶಾಲೆಗಳಲ್ಲೂ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸುತ್ತಿದೆ: ಪೊಲೀಸ್ ಆಯುಕ್ತರು

ಏನಿದು ಬಾಂಬ್ ಬೆದರಿಕೆ?
ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.

ಕಳೆದ ವರ್ಷವೂ ಬೆಂಗಳೂರು ನಗರದ 4 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿರುವ ಆಗಂತುಕರು, ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದ ರಾಜ್ಯದ ತಂಡಕ್ಕೆ ಗಣ್ಯರ ಅಭಿನಂದನೆ

ಮಹದೇವಪುರದ ಗೋಪಾಲನ್ ಇಂಟರ್ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು.

Share This Article