ಇಂದಿನಿಂದ ಬೂಸ್ಟರ್ ಡೋಸ್ – ಯಾರು ಪಡೆಯಬಹುದು? ಅರ್ಹತೆ ಏನು?

Public TV
2 Min Read

ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಕಿತರ ಸಂಖ್ಯೆ ಹೆಚ್ಚಾಗುವುದರ ಜೊತೆಗೆ ಓಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಮತ್ತೆ ಭೀತಿಯನ್ನು ಉಂಟುಮಾಡುತ್ತಿದೆ. ಈ ನಡುವೆಯೇ ಈಗಾಗಲೇ ಎರಡು ಡೋಸ್ ಪಡೆದ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಇಂದಿನಿಂದ ಆರಂಭವಾಗಲಿದೆ.

ಕಳೆದ ಡಿ. 25ರಂದು ಪ್ರಧಾನಿ ಮೋದಿ ಜ.10 ರಿಂದ 60 ವರ್ಷ ದಾಟಿದವರಿಗೆ, ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದಾಗಿ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರಯಲಿದೆ. ಅದರಂತೆ ಜ.8ರ ಶನಿವಾರದಿಂದಲೇ ಕೋವಿನ್ ಪೋರ್ಟಲ್‌ನಲ್ಲಿ 3ನೇ ಡೋಸ್ ಪಡೆಯಲು ಬುಕ್ಕಿಂಗ್ ಆರಂಭವಾಗಿದೆ. ಲಸಿಕಾ ಕೇಂದ್ರಗಳಲ್ಲಿ ನೇರವಾಗಿ ಬುಕ್ ಮಾಡಿಸಿ ಲಸಿಕೆ ಪಡೆಯಲು ಅವಕಾಶವಿದೆ.

ಯಾರು ಪಡೆಯಬಹುದು?: ವೈದ್ಯಕೀಯ ಸಿಬ್ಬಂದಿ, 60 ವರ್ಷ ಮೇಲ್ಪಟ್ಟ ಪೂರ್ವ ರೋಗಪೀಡಿತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ 2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ಅಥವಾ 39 ವಾರ ಆಗಿರಬೇಕು. ಅಂತಹವರು ಬೂಸ್ಟರ್ ಡೋಸ್‌ನ್ನು ಪಡೆಯಲು ಅರ್ಹರಾಗಿರುತ್ತಾರೆ.

ಯಾವ ಲಸಿಕೆ ತೆಗೆದುಕೊಳ್ಳಬೇಕು?: ಮೊದಲಿನ 2 ಡೋಸ್ ಲಸಿಕೆ ಯಾವ ಕಂಪನಿಯದ್ದಾಗಿರುತ್ತೋ, ಅದೇ ಕಂಪನಿಯ ಲಸಿಕೆಯನ್ನು 3ನೇ ಡೋಸ್ ಆಗಿ ಪಡೆಯಬೇಕು. ಅಂದರೆ ಮೊದಲು ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಡಬಲ್ ಡೋಸ್ ಲಸಿಕೆ ಪಡೆದವರು ಪುನಃ ಅದೇ ಲಸಿಕೆಯನ್ನು ಪಡೆಯಬೇಕು. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

ಬೂಸ್ಟರ್ ಡೋಸ್ ಯಾಕೆ?:  ಕಾಯಿಲೆ ಪೀಡಿತರಿಗೆ ಮೊದಲ 2 ಡೋಸ್ ಪಡೆದರೂ ಅವರ ರೋಗನಿರೋಧಕ ಶಕ್ತಿ ವೃದ್ಧಿಸದೇ ಇರಬಹುದು. ಇನ್ನು ವೈದ್ಯ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ನಿತ್ಯ ಸಾವಿರಾರು ಜನ ಹಾಗೂ ರೋಗಿಗಳು ಸಂಪರ್ಕಕ್ಕೆ ಬರುತ್ತಿರುತ್ತಾರೆ. ಹೀಗಾಗಿ ಅವರಿಗೆ ಮುಂಜಾಗ್ರತಾ ಡೋಸ್ ನೀಡಲಾಗುತ್ತದೆ. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

ಲಸಿಕೆ ಮಿಶ್ರಣವಿಲ್ಲ: ಬೂಸ್ಟರ್ ಡೋಸ್ ಬಗ್ಗೆ ಇದ್ದ ಗೊಂದಲಕ್ಕೆ ಕೊನೆಗೂ ಕೇಂದ್ರ ಸರ್ಕಾರ ತೆರೆ ಎಳೆಯುವ ಕೆಲಸ ಮಾಡಿದೆ. ಬೂಸ್ಟರ್ ಡೋಸ್‌ಗೆ ಯಾವುದೇ ಕಾರಣಕ್ಕೂ ಮಿಶ್ರಣ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಮೊದಲು ಕೊಟ್ಟಂತೆಯೇ ಬೂಸ್ಟರ್ ಲಸಿಕೆ ನೀಡಲಾಗುತ್ತದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ. ಈ ಹಿಂದೆ ಮೊದಲ, ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಯಿಲ್ಲ.

Share This Article
Leave a Comment

Leave a Reply

Your email address will not be published. Required fields are marked *