ಗಿಲ್‌ ಶತಕದ ಮಿಂಚು, ಬ್ಯಾಟಿಂಗ್‌ ಲಯಕ್ಕೆ ಮರಳಿದ ಕೊಹ್ಲಿ ಅರ್ಧ ಶತಕ – ಉತ್ತಮ ಸ್ಥಿತಿಯಲ್ಲಿ ಭಾರತ

Public TV
2 Min Read

ಅಹಮದಾಬಾದ್‌: ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್‌ ಸರಣಿಯ 4ನೇ ಪಂದ್ಯದಲ್ಲಿ ಭಾರತ ತನ್ನ ಸರದಿಯ 2ನೇ ದಿನದಲ್ಲಿ ಉತ್ತಮ ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ. ಅಂತಿಮವಾಗಿ 3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿದೆ.

ನಾಯಕ ರೋಹಿತ್ ಶರ್ಮಾ (Rohit Sharma) ಔಟಾದ ಬಳಿಕ ಚೇತೇಶ್ವರ ಪೂಜಾರ ಮತ್ತು ಶುಭಮನ್ ಗಿಲ್ (Shubman Gill) ಅತ್ಯುತ್ತಮ ಜೊತೆಯಾಟ ಆಡಿದರು. 2ನೇ ವಿಕೆಟ್‌ಗೆ ಈ ಜೋಡಿ 113 ರನ್‌ಗಳ ಜೊತೆಯಾಟ ಆಡಿತು. ಚೇತೇಶ್ವರ ಪೂಜಾರ 121 ಎಸೆತಗಳಲ್ಲಿ 42 ರನ್ ಗಳಿಸಿ ಔಟಾದರು. ಬಳಿಕವೂ ಉತ್ತಮ ಬ್ಯಾಟಿಂಗ್‌ ಮುಂದುವರಿಸಿದ ಗಿಲ್‌ ಟೀಂ ಇಂಡಿಯಾಗೆ ಆಸರೆಯಾದರು. 235 ಎಸೆತಗಳಲ್ಲಿ 12 ಬೌಂಡರಿ 1 ಸಿಕ್ಸರ್‌ನೊಂದಿಗೆ 128 ರನ್ ಗಳಿಸಿದ ಗಿಲ್ ನಥನ್‌ ಲಿಯಾನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

ಬ್ಯಾಟಿಂಗ್‌ ಲಯಕ್ಕೆ ಮರಳಿದ ಕೊಹ್ಲಿ: ಕಳೆದ ಎರಡೂ ಇನ್ನಿಂಗ್ಸ್‌ಗಳಲ್ಲಿ ದೊಡ್ಡ ಮೊತ್ತ ಕಲೆಹಾಕುವಲ್ಲಿ ಎಡವಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ಲಯ ಕಂಡುಕೊಂಡಿದ್ದಾರೆ. ಶನಿವಾರ ಎಚ್ಚರಿಕೆಯಿಂದಲೇ ಬ್ಯಾಟಿಂಗ್ ಆರಂಭಿಸಿದ ಕೊಹ್ಲಿ ಅರ್ಧ ಶತಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 128 ಎಸೆತಗಳನ್ನು ಎದುರಿಸಿದ ಕೊಹ್ಲಿ 5 ಬೌಂಡರಿ ಸಹಿತ 59 ರನ್ ಗಳಿಸಿದ್ದು, 4ನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

ಕೊಹ್ಲಿ ಜೊತೆಗೆ ಜವಾಬ್ದಾರಿಯತ ಬ್ಯಾಟಿಂಗ್ ಮಾಡಿದ ರವೀಂದ್ರ ಜಡೇಜಾ ಸಹ 54 ಎಸೆತಗಳಲ್ಲಿ 16 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದಿದ್ದು, ಸೂಪರ್‌ ಸಂಡೇನಲ್ಲಿ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ. ಇದನ್ನೂ ಓದಿ: 4ನೇ ಪಂದ್ಯದಲ್ಲೂ RCBಗೆ ಹೀನಾಯ ಸೋಲು; ಹೀಲಿ ಸ್ಫೋಟಕ ಬ್ಯಾಟಿಂಗ್‌ – ವಾರಿಯರ್ಸ್‌ಗೆ 10 ವಿಕೆಟ್‌ಗಳ ಭರ್ಜರಿ ಜಯ

3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿರುವ ಭಾರತಕ್ಕೆ ಇನ್ನೂ 191 ರನ್‌ಗಳ ಅಗತ್ಯವಿದೆ. ಇದನ್ನೂ ಓದಿ: ಅಶ್ವಿನ್‌ಗೆ 6 ವಿಕೆಟ್ – ಆಸ್ಟ್ರೇಲಿಯಾ 480 ರನ್‌ಗಳಿಗೆ ಆಲೌಟ್

Share This Article
Leave a Comment

Leave a Reply

Your email address will not be published. Required fields are marked *