Kalaburagi | ಗುಟ್ಕಾ ತಿನ್ನಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Public TV
1 Min Read

ಕಲಬುರಗಿ: ಗುಟ್ಕಾ (Gutka) ತಿನ್ನಬೇಡ, ಶರೀರ ಹಾಳಾಗುತ್ತದೆ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ, ಮೊಮ್ಮಗನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ರೋಹಿತ್ ಮಣ್ಣಾಂಕಲಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ರೋಹಿತ್ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ದಮಯಂತಿ ಎಂಬ ಅಜ್ಜಿ ತನ್ನ ಮೊಮ್ಮಗನನ್ನು ಕಳೆದ ಏಳೆಂಟು ವರ್ಷಗಳಿಂದ ಸಾಕಿ ಸಲುಹಿ, ವಿದ್ಯಾಭ್ಯಾಸ ಕೊಡಿಸುತ್ತಿದ್ದಳು. ಅಜ್ಜಿಗೆ ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರಿಂದ ಗೊತ್ತಾಗಿದ್ದು, ತಿನ್ನಬೇಡಾ ಎಂಬ ಬುದ್ಧಿಮಾತುಗಳನ್ನು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಂದು ʻಧರ್ಮ ಸಂರಕ್ಷಣಾʼ ಸಮಾವೇಶ

ಬುದ್ಧಿವಾದದ ಮಾತುಗಳನ್ನು ಹೇಳಿದ ಒಂದೇ ಕಾರಣಕ್ಕಾಗಿ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಮೀರ್ ಮುಲ್ಲಾನ ಕುತಂತ್ರಕ್ಕೆ ಕೊನೇ ಮೊಳೆ ಹೊಡೆಯೋಣ – ಚಕ್ರವರ್ತಿ ಸೂಲಿಬೆಲೆ

Share This Article