ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

Public TV
2 Min Read

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ವ್ಯಾಪಾರ ಬಹಿಷ್ಕಾರದ ಧರ್ಮ ದಂಗಲ್ ಮತ್ತೆ ಮುಂದುವರಿದಿದೆ. ಕಳೆದ ವರ್ಷದಿಂದ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕಲಾಗುತ್ತಿದೆ. ಇದೀಗ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಮಂಗಳೂರಿನ (Mangaluru) ಕಾವೂರು (Kavoor) ಶ್ರೀಮಹಾಲಿಂಗೇಶ್ವರ ದೇವಸ್ಥಾನದ (Shree Mahalingeswara Temple) ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವಿಎಚ್‍ಪಿ – ಭಜರಂಗದಳ ಬಹಿಷ್ಕಾರ ಹಾಕಿದ್ದು, ಕ್ಷೇತ್ರದ ಆಡಳಿತ ಮಂಡಳಿಯೂ ಸಮ್ಮತಿ ನೀಡಿದೆ.

ಕಳೆದ ವರ್ಷದಿಂದ ಕರಾವಳಿಯ ಹೆಚ್ಚಿನ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಾಗಿತ್ತು. ಈ ಸಂಪ್ರದಾಯ ಈ ವರ್ಷವೂ ಮುಂದುವರಿದಿದ್ದು, ಇದೀಗ ಮಂಗಳೂರಿನ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಈ ಬಹಿಷ್ಕಾರ ಮುಂದುವರಿದಿದೆ. ಈ ದೇವಸ್ಥಾನದ ಜಾತ್ರಾ ಮಹೋತ್ಸವವು (Fair) ಜ. 14ರ ಮಕರ ಸಂಕ್ರಮಣದಿಂದ ಆರಂಭಗೊಂಡು ಜ. 18ರವರೆಗೆ ನಡೆಯಲಿದೆ.

ಈ 4 ದಿನಗಳ ಕಾಲ ಸಾವಿರಾರು ಜನ ಸೇರುವ ಈ ಜಾತ್ರೆಯಲ್ಲಿ ನೂರಾರು ವ್ಯಾಪಾರಸ್ಥರು ವ್ಯಾಪಾರ ಮಾಡ್ತಾರೆ. ಕಳೆದ ಹಲವಾರು ವರ್ಷಗಳಿಂದಲೂ ಈ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಮಾತ್ರ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಅನುಮತಿ ಪಡೆದು ಕ್ಷೇತ್ರದ ಆವರಣದಲ್ಲಿ ವಿಎಚ್‍ಪಿ ಹಾಗೂ ಭಜರಂಗದಳ ಬ್ಯಾನರ್ ಅಳವಡಿಕೆ ಮಾಡಿದ್ದು, ಅನ್ಯಧರ್ಮಿಯರ ವ್ಯಾಪಾರಕ್ಕೆ ಸಂಪೂರ್ಣ ಬಹಿಷ್ಕಾರ ಹಾಕಲಾಗಿದೆ.

ಹಿಂದೂ ಸಂಘಟನೆ ಅಳವಡಿಸಿರುವ ಬ್ಯಾನರ್‍ನಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ, ವಿಗ್ರಹರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರದ ಅವಕಾಶವಿಲ್ಲ ಎಂದು ಬರೆಯಲಾಗಿದೆ. ಈಗಾಗಲೇ ದೇವಸ್ಥಾನದ ಜಾತ್ರೆ ಆರಂಭಗೊಂಡಿದ್ದು, ಕ್ಷೇತ್ರದ ಒಳ ಹಾಗೂ ಹೊರ ಭಾಗದಲ್ಲಿ ನೂರಾರು ಸ್ಟಾಲ್‍ಗಳ ನಿರ್ಮಾಣವಾಗಿದೆ. ಈ ಬಾರಿ ಸ್ಟಾಲ್‍ಗಳ ನಿರ್ವಹಣೆಯ ಉಸ್ತುವಾರಿಯನ್ನು ಭಜರಂಗದಳ ಕಾರ್ಯಕರ್ತರಿಗೆ ನೀಡಿರುವುದರಿಂದ ಇತರ ಧರ್ಮದವರಿಗೆ ಯಾವುದೇ ಕಾರಣಕ್ಕೂ ವ್ಯಾಪಾರ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ. ಮುಸ್ಲಿಮರಿಗೆ ಈ ಕ್ಷೇತ್ರದಲ್ಲಿ ವ್ಯಾಪಾರ ಬಹಿಷ್ಕಾರ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲೇ ನಿರ್ಧರಿಸಲಾಗಿದೆ. ಇದನ್ನೂ ಓದಿ: ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಎನ್ನುವ ಬ್ಯಾನರ್ ಪ್ರತ್ಯಕ್ಷವಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದೇವಸ್ಥಾನದ ಸುತ್ತ ಸಿಎಆರ್ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ಮಾಡಲಾಗಿದೆ. ಒಟ್ಟಿನಲ್ಲಿ ಹಲವು ವರ್ಷಗಳಿಂದ ಸೌಹಾರ್ದಯುತವಾಗಿ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಇನ್ನು ಮಾತ್ರ ವ್ಯಾಪಾರ ಮಾಡುವ ಅವಕಾಶ ಕಡಿಮೆಯಾದಂತಿದೆ. ಇದನ್ನೂ ಓದಿ: ಬೆಂಗಳೂರಿನ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಚಿರತೆ ಆತಂಕ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *