Boycott Turkey| ಟರ್ಕಿಗೆ ದೊಡ್ಡ ಹೊಡೆತ – ಸೆಲೆಬಿ ಲೈಸೆನ್ಸ್‌ ರದ್ದು!

Public TV
2 Min Read

– 9 ವಿಮಾನ ನಿಲ್ದಾಣಗಳಲ್ಲಿ ಸೇವೆ ನೀಡುತ್ತಿದ್ದ ಕಂಪನಿ

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನಕ್ಕೆ (Pakistan) ನೆರವು ನೀಡಿದ್ದ ಟರ್ಕಿ (Turkey) ವಿರುದ್ಧ ನಡೆಸಲಾಗುತ್ತಿರುವ Boycott Turkey ಅಭಿಯಾನ ಜೋರಾಗುತ್ತಿದೆ. ಒಂದು ಕಡೆಯಲ್ಲಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡುತ್ತಿದ್ದರೆ ಇನ್ನೊಂದು ಕಡೆ ಕೇಂದ್ರ ಸರ್ಕಾರವೇ ಟರ್ಕಿಗೆ ಶಾಕ್‌ ನೀಡಿದೆ.

ದೇಶದ 9 ವಿಮಾನ ನಿಲ್ದಾಣಗಳಲ್ಲಿ ಪ್ರಾಥಮಿಕ ಹಂತದ ಸೇವೆಗಳನ್ನು ನೀಡುತ್ತಿದ್ದ ಟರ್ಕಿಯ ಸೆಲೆಬಿ (Celebi) ಏವಿಯೇಷನ್ ಕಂಪನಿಗೆ ನೀಡಲಾಗಿದ್ದ ಸೇವಾ ಲೈಸನ್ಸ್ ಗಳನ್ನು ಭಾರತೀಯ ನಾಗರಿಕ ವಿಮಾನಯಾನ ಸುರಕ್ಷಾ ಬ್ಯೂರೋ (ಬಿಸಿಸಿಎಸ್) ರದ್ದು ಮಾಡಿದೆ. ರಾಷ್ಟ್ರೀಯ ಭದ್ರತಾ ಕಾಳಜಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್‌, ಕೊಚ್ಚಿನ್‌, ಕಣ್ಣೂರು, ಚೆನ್ನೈ, ಗೋವಾದಲ್ಲಿ ಈ ಕಂಪನಿ ಪ್ರಾಥಮಿಕ ಸೇವೆ ನೀಡುತ್ತಿತ್ತು. ಸದ್ಯವೇ ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಪ್ರಾಥಮಿಕ ಸೇವೆಗಳನ್ನು ನೀಡುವ ಗುತ್ತಿಗೆಯ ಆ ಕಂಪನಿ ಪಡೆಯಲು ಸಿದ್ಧತೆ ನಡೆಸಿತ್ತು. ಅಷ್ಟರಲ್ಲೇ ಭಾರತ ಸರ್ಕಾರ ಸೆಲೆಬಿಗೆ ನೀಡಲಾಗಿದ್ದ ಸೇವಾ ಲೈಸೆನ್ಸ್‌ ರದ್ದುಗೊಳಿಸಿದೆ. ಇದನ್ನೂ ಓದಿ: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

ಸೆಲೆಬಿ ಏವಿಯೇಷನ್ ​​ಎರಡು ಪ್ರತ್ಯೇಕ ಘಟಕಗಳನ್ನು ಹೊಂದಿದೆ. ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ವಿಮಾನ ನಿಲ್ದಾಣ ನಿರ್ವಹಣೆ ಕಾರ್ಯಾಚರಣೆ ನಡೆಸುತ್ತಿದ್ದರೆ ಸೆಲೆಬಿ ದೆಹಲಿ ಕಾರ್ಗೋ ಟರ್ಮಿನಲ್ ಮ್ಯಾನೇಜ್‌ಮೆಂಟ್ ಇಂಡಿಯಾ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಿತ್ತು

ಸೆಲೆಬಿ 2008 ರಲ್ಲಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಉದ್ಯಮದ ಮೂಲಕ ಭಾರತವನ್ನು ಪ್ರವೇಶಿಸಿತು. ಸೆಲೆಬಿ ಕಂಪನಿಗೆ ಕೆಲಸ ನಿರ್ವಹಿಸಲು ಯುಪಿಎ ಸರ್ಕಾರ ಅನುಮತಿ ನೀಡಿತ್ತು. ಇದನ್ನೂ ಓದಿ: ಮಲಯಾಳಂ ಚಿತ್ರರಂಗ ನನ್ನ ವೃತ್ತಿಜೀವನವನ್ನೇ ಬದಲಿಸಿದೆ: ಕಮಲ್ ಹಾಸನ್

ಮುಂಬೈ ದಾಳಿಯಾದ ನಂತರ ಬಾಳಾಸಾಹೇಬ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆಗೆ ಸಂಯೋಜಿತವಾಗಿರುವ ಅನೇಕ ವಾಯುಯಾನ ಕಾರ್ಮಿಕ ಸಂಘಗಳು, ಭಾರತದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಸೆಲೆಬಿಗೆ ಅನುಮತಿ ನೀಡಿದ್ದನ್ನು ಭಾರೀ ವಿರೋಧಿಸಿದ್ದವು.

Share This Article